ಗ್ರಾಮ ಪಂಚಾಯಿತಿ ಚುನಾವಣೆ: ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ:ಇಬ್ಬರು ಮುಖ್ಯ ಶಿಕ್ಷಕರು ಅಮಾನತು

0
32

ಕಲಬುರಗಿ: ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ-2020ಗೆ ಸಂಬಂಧಿಸಿದಂತೆ ಚುನಾವಣಾ ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯತನ ಹಾಗೂ ಬೇಜವಾಬ್ದಾರಿತನ ತೋರಿದ ಹಿನ್ನೆಲೆಯಲ್ಲಿ ಈ ಕೆಳಕಂಡ ಇಬ್ಬರು ಮುಖ್ಯ ಗುರುಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಿ ಕಲಬುರಗಿ ಜಿಲ್ಲಾ ಚುನಾವಣಾಧಿಕಾರಿ ವಿ.ವಿ. ಜ್ಯೋತ್ಸ್ನಾ ಅವರು ಸೋಮವಾರ ಆದೇಶ ಹೊರಡಿಸಿದ್ದಾರೆ.

ಕಲಬುರಗಿ ತಾಲೂಕಿನ ಕಪನೂರ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಗುರುಗಳಾದ ಎಸ್.ಆರ್. ಕಟ್ಟಿಮನಿ ಹಾಗೂ ಕಮಲಾಪುರ ತಾಲೂಕಿನ ಕಲಮುಡ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಗುರುಗಳಾದ ಬಂಡೆಪ್ಪ ಡಿ. ಬೇನೂರ ಇವರ ವಿರುದ್ಧ ಇಲಾಖಾ ವಿಚಾರಣೆ ಬಾಕಿ ಇರಿಸಿ ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು 1957ರ ನಿಯಮ 10(1) (ಡಿ) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ.

Contact Your\'s Advertisement; 9902492681

ಮುಖ್ಯ ಗುರುಗಳಾದ ಎಸ್.ಆರ್. ಕಟ್ಟಿಮನಿ ಇವರನ್ನು ಕಲಬುರಗಿ ತಾಲೂಕಿನ ಅವರಾದ (ಬಿ) ಗ್ರಾಮ ಪಂಚಾಯಿತಿಯ ಚುನಾವಣಾಧಿಕಾರಿಗಳಾಗಿ ಹಾಗೂ ಮುಖ್ಯ ಗುರುಗಳಾದ ಬಂಡೆಪ್ಪ ಡಿ. ಬೇನೂರ ಇವರನ್ನು ಕಲಬುರಗಿ ತಾಲೂಕಿನ ಸಾವಳಗಿ (ಬಿ) ಗ್ರಾಮ ಪಂಚಾಯಿತಿಯ ಚುನಾವಣಾಧಿಕಾರಿಗಳನ್ನಾಗಿ ನೇಮಕ ಮಾಡಲಾಗಿತ್ತು.

ಈ ಅಮಾನತ್ತುಗೊಂಡ ಇಬ್ಬರು ಶಿಕ್ಷಕರು ಕರ್ನಾಟಕ ಸೇವಾ ನಿಯಮಗಳು 1958ರ ನಿಯಮಗಳು 98ರನ್ವಯ ನೌಕರರು ಜೀವನಾಧಾರ ಭತ್ಯೆ ಪಡೆಯಲು ಅರ್ಹರಿರುತ್ತಾರೆ. ಸದರಿ ನೌಕರರು ಸಕ್ಷಮ ಪ್ರಾಧಿಕಾರದ ಅನುಮತಿ ಪಡೆಯದೇ ಕೇಂದ್ರಸ್ಥಾನ ಬಿಡತಕ್ಕದ್ದಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here