ಗ್ರಾಮ ಪಂಚಾಯತಿ ಚುನಾವಣೆ: ಮತದಾನ ದಿನದಂದು ಗ್ರಾ.ಪಂ. ವ್ಯಾಪ್ತಿಯಲ್ಲಿ ಸಂತೆ, ಜಾತ್ರೆ ನಿಷೇಧ

0
44

ಕಲಬುರಗಿ: ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆಯ ಮೊದಲ ಹಂತದ ಚುನಾವಣೆ ಜಿಲ್ಲೆಯಲ್ಲಿ ಡಿ.22 ರಂದು ನಡೆಯಲಿದೆ. ಚುನಾವಣೆಯನ್ನು ಮುಕ್ತ, ಶಾಂತಿಯುತ ಹಾಗೂ ನ್ಯಾಯಸಮ್ಮತವಾಗಿ ಜರುಗಿಸಲು ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿ ಕ್ಷೇತ್ರ ವ್ಯಾಪ್ತಿಗೆ ಅನ್ವಯಿಸುವಂತೆ ಮತದಾನ ದಿನದಂದು ಎಲ್ಲಾ ರೀತಿಯ ಸಂತೆ ಮತ್ತು ಜಾತ್ರೆ ನಿಷೇಧೆಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವಿ.ವಿ.ಜ್ಯೋತ್ಸ್ನಾ ಅವರು ಮಂಗಳವಾರ ಆದೇಶ ಹೊರಡಿಸಿದ್ದಾರೆ.

ಚುನಾವಣೆ ನಡೆಯಲಿರುವ ಗ್ರಾ.ಪಂ ವ್ಯಾಪ್ತಿಯಲ್ಲಿ ಮತದಾನ ಮುಕ್ತಾಯಕ್ಕೆ 2 ದಿನ ಮುನ್ನ ಅಂದರೆ ಡಿ.20 ಸಾಯಂಕಾಲ 5 ಗಂಟೆಯಿಂದ ಡಿ.22 ಸಂಜೆ 5 ಗಂಟೆ ವರೆಗೆ ಎಲ್ಲಾ ತರಹದ ಮದ್ಯದ ಅಂಗಡಿಗಳನ್ನು ಸೇರಿದಂತೆ ಮದ್ಯ ತಯಾರಿಕಾ ಘಟಕಗಳನ್ನು ಮುಚ್ಚುವಂತೆ ಸಹ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

Contact Your\'s Advertisement; 9902492681

ಮತದಾನ ಕೇಂದ್ರದ 100 ಮೀ. ವ್ಯಾಪ್ತಿಯೊಳಗೆ ಸಿ.ಆರ್.ಪಿ.ಸಿ. ಕಲಂ 144ರ ಅನ್ವಯ ಚುನಾವಣೆಗೆ ಸಂಬಂಧಪಟ್ಟ ಮತದಾರರು ಹಾಗೂ ಸಿಬ್ಬಂದಿ ಹೊರತುಪಡಿಸಿ ಇತರೆ ವ್ಯಕ್ತಿಗಳ ಪ್ರವೇಶ ನಿರ್ಬಂಧಿಸಲಾಗಿದೆ.

ವೇತನ ಸಹಿತ ರಜೆ ಘೋಷಣೆ: ಡಿ.22ರಂದು ಗ್ರಾ.ಪಂ. ಚುನಾವಣೆ ನಡೆಯುವ ಕ್ಷೇತ್ರಗಳ ವ್ಯಾಪ್ತಿಯಲ್ಲಿ ನೋಂದಾಯಿಸಿರುವ ಅರ್ಹ ಮತದಾರರು ಮತ ಚಲಾಯಿಸಲು ಅನಕೂಲವಾಗುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಕಚೇರಿಗಳ ಸರ್ಕಾರಿ ನೌಕರರು, ಶಾಲಾ ಕಾಲೇಜುಗಳ (ಅನುದಾನಿತ ಶಿಕ್ಷಣ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ) ಸರ್ಕಾರಿ ನೌಕರರಿಗೆ ಮತದಾನ ದಿನದಂದು ವೇತನ ಸಹಿತ ರಜೆಯನ್ನು ಘೋಷಿಸಲಾಗಿದೆ. ಇದಲ್ಲದೆ ವ್ಯವಹಾರಿಕ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು (Industrial undertaking) ಅಥವಾ ಇನ್ನಿತರ ಸಾರ್ವಜನಿಕ ಸಂಸ್ಥೆಗಳಲ್ಲಿ (Establishment) ಖಾಯಂ ಹಾಗೂ ದಿನಗೂಲಿ ಮೇಲೆ ಕಾರ್ಯ ನಿರ್ವಹಿಸುತ್ತಿರುವ ನೌಕರರು ಸಹ ಮತದಾನ ದಿನದಂದು ವೇತನ ಸಹಿತ ರಜೆ ಪಡೆಯಲು ಅರ್ಹರಿರುತ್ತಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here