ಕಲಬುರಗಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಈ ಕೆಳಕಂಡ ಯೋಜನೆಗಳಿಗೆ ಅರ್ಹ ವಿದ್ಯಾರ್ಥಿ, ಕ್ರೀಡಾಪಟುಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕಲಬುರಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ ಜಿಲ್ಲೆಯ ಪ್ರತಿಭಾವಂತ ಮಾಧ್ಯಮಿಕ, ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟು (6 ರಿಂದ 10 ನೇ ತರಗತಿ) ಗಳು 2018 ರ ಜನವರಿ 1 ರಿಂದ 2019 ರ ಮಾರ್ಚ್ 31 ರ ಅವಧಿಯಲ್ಲಿ ರಾಜ್ಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದ ಅಥವಾ ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ 10,000 ರೂ.ಗಳ ಪ್ರೋತ್ಸಾಹಿಕ ಕ್ರೀಡಾ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ಅದೇ ರೀತಿ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಿದ ಕ್ರೀಡಾಪಟುಗಳ ಶೈಕ್ಷಣಿಕ ಶುಲ್ಕವನ್ನು ಮರುಪಾವತಿಸಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಹ ವಿದ್ಯಾರ್ಥಿಗಳು http://serviceonline.gov.in/Karnataka ವೆಬ್‌ಸೈಟ್‌ನಲ್ಲಿ ಆನ್‌ಲೈನ್ ಮೂಲಕ 2019ರ ಜೂನ್ 30 ರೊಳಗಾಗಿ ಅರ್ಜಿ ಸಲ್ಲಿಸಬಹುದಾದಾಗಿದೆ.
ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಪ್ರತಿಭಾನಿತ್ವ ಕ್ರೀಡಾಪಟುಗಳಿಂದ ೨೦೧೮ನೇ ಸಾಲಿನ ಏಕಲವ್ಯ ಪ್ರಶಸ್ತಿ ಹಾಗೂ ಹಿರಿಯ ಕ್ರೀಡಾಪಟು/ತರಬೇತುದಾರರಾಗಿ ಸಾಧನೆ ಮಾಡಿರುವ ಹಿರಿಯ ಕ್ರೀಡಾಪಟುಗಳಿಂದ ಜೀವಮಾನ ಸಾಧನೆ ಪ್ರಶಸ್ತಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅರ್ಹರು www.karnataka.gov.in/dye ವೆಬ್‌ಸೈಟ್‌ನಲ್ಲಿ ಆನ್‌ಲೈನ್ ಮೂಲಕ 2019ರ ಜೂನ್ 15 ರೊಳಗಾಗಿ ಸರ್ಜಿ ಸಲ್ಲಿಸಬೇಕು.
ಕರ್ನಾಟಕ ರಾಜ್ಯದ ಅರ್ಹ ಕ್ರೀಡಾಪಟುಗಳಿಂದ 2018ನೇ ಸಾಲಿನ ’ಕ್ರೀಡಾ ರತ್ನ ಪ್ರಶಸಿ’ಗಾಗಿ ಆನ್‌ಲೈನ್ ಅರ್ಜಿಗಳನ್ನು ಆಹ್ವಾಸಲಾಗಿದೆ. ಅರ್ಹ ಕ್ರೀಡಾಪಟುಗಳು http://serviceonline.gov.in/Karnataka ವೆಬ್‌ಸೈಟ್‌ನಲ್ಲಿ ಆನ್‌ಲೈನ್ ಮೂಲಕ 2019ರ ಜೂನ್ 15 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.