ಕರ್ನಾಟಕ ಗ್ರಾಮೀಣ ಬ್ಯಾಂಕ್ಗೆ ಲೋಟಿ: ಕೃತ್ಯ ಸಿಸಿಟಿವಿಯಲ್ಲಿ ಸೇರೆ

0
74

ಕಲಬುರಗಿ: ಚಿಂಚೋಳಿ ತಾಲ್ಲೂಕಿನ ನಿಡಗುಂದಾ ಗ್ರಾಮದ ಕರ್ನಾಟಕ ಗ್ರಾಮೀಣ ಬ್ಯಾಂಕ್ಗೆ ದರೋಡೆಯಾಗಿದ್ದು, 50 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು 12 ಲಕ್ಷಕ್ಕೂ ಅಧಿಕ ನಗದು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ. ದರೋಡೆ ಖೋರರ ಕೃತ್ಯ ಸಿಸಿಟಿವಿಯಲ್ಲಿ ಸೇರಿಯಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.

ಇಬ್ಬರು ಮುಸುಕುದಾರಿಗಳು ಬ್ಯಾಂಕ್ ಕಿಡಕಿಯಿಂದ ಒಳನುಗ್ಗಿ, ಸಿಸಿಟಿವಿ ಕ್ಯಾಮರಾ ಲೈನ್ ಕತ್ತರಿಸಿ ಕಳ್ಳತನ ಮಾಡಿರುವುದು ಕಂಡುಬಂದಿದ್ದು, ಖದೀಮರು ಲಾಕರ್ ನಲ್ಲಿದ್ದ ಚಿನ್ನಾಭರಣ ಹಾಗೂ ನಗದು ಲೂಟಿ ಮಾಡಿಕೊಂಡು ಪರಾರಿಯಾಗಿದ್ದಾರೆ.

Contact Your\'s Advertisement; 9902492681

ಸ್ಥಳಕ್ಕೆ ಸುಲೇಪೇಟ್ ಪೊಲೀಸರು ಭೇಟಿ ನೀಡಿ ಪರೀಶಿಲನೆ ನಡೆಸುತ್ತಿದ್ದು, ಸದ್ಯ ಕಳವಾಗಿರುವ ಹಣ ಹಾಗೂ ಚಿನ್ನಾಭರಣದ ಲೆಕ್ಕ ಶೋಧಿಸಲಾಗುತ್ತಿದೆ. ಸಿಸಿಟಿವಿ ದೃಶ್ಯದ ಆಧಾರದ ಮೇಲೆ ಕಳ್ಳರ ಬಂಧನಕ್ಕೆ ಪೊಲೀಸರು ಜಾಲ ಬೀಸಿದ್ದಾದ್ದು, ಈ ಕುರಿತು ಸುಲೇಪೇಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here