ಕಲಬುರಗಿ: ಕೊರೋನಾ ವೈರಸ್ ರೂಪಾಂತರ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಇಂದಿನಿಂದಲೇ ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ರಾಜ್ಯದ ಸಾರ್ವಜನಿಕರ ಆರೋಗ್ಯದ ಹೀತದೃಷ್ಟಿಯಿಂದ ನೈಟ್ ಕರ್ಫ್ಯೂ ಜಾರಿ ಮಾಡಲು ಘೋಷಣೆ ಮಾಡಿರುವ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯುರಪ್ಪನವರ ನಿರ್ಧಾರವನ್ನು ಕಲಬುರಗಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಅಂಬಾರಾಯ ಅಷ್ಠಗಿ ಸ್ವಾಗತಿಸಿದ್ದಾರೆ.
ನೈಟ್ ಕರ್ಫ್ಯೂ ಜಾರಿಯಿಂದ ಕೊರೋನಾ ರೂಪಾಂತರ ವೈರಸ್ ಹರಡುವಿಕೆಯನ್ನು ತಡೆಯಲು ಸಹಕಾರಿಯಾಗಲಿದೆ.ಗ್ರಾಮ ಪಂಚಾಯತ್ ಚುನಾವಣೆ ಫಲಿತಾಂಶ ಹಾಗೂ ಹೊಸ ವರ್ಷದ ಆಚರಣೆ ಹಿನ್ನೆಲೆಯಲ್ಲಿ ಸಾರ್ವಜನಿಕರು ಸರ್ಕಾರದ ನಿಯಮಾವಳಿಗಳನ್ನು ಪಾಲಿಸಿ ಆರೋಗ್ಯ ಬಗ್ಗೆ ಹೆಚ್ಚಿನ ಕಾಳಜಿ ವಹಿಸಲು ಅಂಬಾರಾಯ ಅಷ್ಠಗಿ ಮನವಿ ಮಾಡಿದ್ದಾರೆ