ನರಗುಂದ: ನರಗುಂದ ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಿದ ಡಿ. ದೇವರಾಜ ಅರಸು ಭವನವನ್ನು ರಾಜ್ಯದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಅವರು ಲೋಕಾರ್ಪಣೆಗೊಳಿಸಿದರು.
ನರಗುಂದ ಪಟ್ಟಣದ ಮಿನಿ ವಿಧಾನಸೌಧ ಪಟ್ಟಣದಲ್ಲಿ 5 ಗುಂಟೆ ನಿವೇಶನದಲ್ಲಿ 2 ಅಂತಸ್ತಿನ ಡಿ.ದೇವರಾಜ ಅರಸು ಭವನವನ್ನು 1 ಕೋಟಿ ರೂ.ಅನುದಾನದಲ್ಲಿ ಕೆ.ಆರ್.ಐ.ಡಿ.ಎಲ್.ವತಿಯಿಂದ ನಿರ್ಮಿಸಲಾಗಿದೆ. ಈ ಕಟ್ಟಡವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯಕ್ರಮಗಳಿಗಾಗಿ ಹಾಗೂ ವಿದ್ಯಾರ್ಥಿಗಳ ವಿವಿಧ ತರಬೇತಿ ಕಾರ್ಯಕ್ರಮಗಳಿಗೆ ಉಪಯೋಗಿಸಿ ಅವರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸಲು ಸಹಾಯವಾಗಲೆಂದು ನಿರ್ಮಾಣಮಾಡಲಾಗಿದೆ.
ಕಟ್ಟಡ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ನರಗುಂದ ಪುರಸಭೆ ಅಧ್ಯಕ್ಷೆ ಶ್ರೀಮತಿ ಭಾವನಾ ಪಾಟೀಲ, ಉಪಾಧ್ಯಕ್ಷ ಪ್ರಶಾಂತ ಜೋಶಿ, ಎ.ಪಿ.ಎಂ.ಸಿ. ಅಧ್ಯಕ್ಷ ಶಂಕರಗೌಡ ಯಲ್ಲಪ್ಪಗೌಡ್ರ ,ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ರತ್ನಮ್ಮ ಹೊಸಮನಿ, ತಾಲೂಕಾ ಅಧಿಕಾರಿ ಗೀತಾ ಹೂಗಾರ, ಕೆ.ಆರ್.ಐ.ಡಿ.ಎಲ್. ಕಾರ್ಯನಿರ್ವಾಹಕ ಅಭಿಯಂತರ ಮಲ್ಲಿಕಾರ್ಜುನಸ್ವಾಮಿ ಸೇರಿದಂತೆ ಇತರರು ಇದ್ದರು.