ಮಹಾನಗರ ಪಾಲಿಕೆ: ವಿವಿಧ ಯೋಜನೆಗಳಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

0
185

ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆಯಿಂದ 2018-19ನೇ ಸಾಲಿನ ಎಸ್.ಎಫ್.ಸಿ. (ಮುಕ್ತ ನಿಧಿ) ಅನುದಾನದ ಶೇ.24.10 ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಹಾಗೂ ಎಸ್.ಸಿ.ಪಿ./ಟಿ.ಎಸ್.ಪಿ. ಅನುದಾನದಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜನರಿಗೆ ಈ ಕೆಳಕಂಡ ಯೋಜನೆಗಳಡಿ ಸಹಾಯಧನ ನೀಡಲಾಗುತ್ತಿದೆ. ಇದಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಮಹಾನಗರ ಪಾಲಿಕೆಯ ಆಯುಕ್ತೆ ಬಿ. ಫೌಜಿಯಾ ತರನ್ನುಮ್ ಅವರು ತಿಳಿಸಿದ್ದಾರೆ.

Contact Your\'s Advertisement; 9902492681

ಪೌರ ಕಾರ್ಮಿಕರ ಕಲ್ಯಾಣಕ್ಕಾಗಿ ಎಂ.ಬಿ.ಬಿ.ಎಸ್., ಬಿ.ಇ., ಬಿ.ಕಾಂ., ಎಂ.ಕಾಂ., ಬಿ.ಎಸ್ಸಿ, ಎಂ.ಎಸ್ಸಿ. ಎಂ.ಬಿ.ಎ. ಹಾಗೂ ಇತರೆ ತಾಂತ್ರಿಕ ಪದವಿ ವ್ಯಾಸಂಗ ಮಾಡುತ್ತಿರುವ (ಪ.ಜಾ./ಪ.ಪಂ.) ಪೌರಕಾರ್ಮಿಕರ ಮಕ್ಕಳಿಗೆ ಮಾತ್ರ ಲ್ಯಾಪ್ ಟಾಪ್ ಖರೀದಿಗಾಗಿ ಸಹಾಯಧನ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಪೌರಕಾರ್ಮಿಕರಿಗೆ ಪಕ್ಕಾ ಮನೆ ನಿರ್ಮಾಣ ಮಾಡಲು ಸಹಾಯಧನ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಪೌರಕಾರ್ಮಿಕರ ಮಕ್ಕಳಿಗೆ ಸಣ್ಣ ಉದ್ದಿಮೆ ಸ್ಥಾಪಿಸಲು (ಬ್ಯಾಂಕ್ ಮುಖಾಂತರ) ಸಹಾಯಧನ ನೀಡಲಾಗುತ್ತಿದೆ.
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಜನರ ಯೋಜನೆಗಳ ವಿವರ ಇಂತಿದೆ. ಸಣ್ಣ ಉದ್ದಿಮೆ ಸ್ಥಾಪಿಸಲು (ಬ್ಯಾಂಕ್ ಮುಖಾಂತರ) ಸಹಾಯಧನ, ಕ್ರೀಡಾಕೂಟದಲ್ಲಿ ಸ್ಪರ್ಧಿಸಿದವರಿಗೆ ಸಹಾಯಧನ (ತಾಲೂಕು, ಜಿಲ್ಲಾ, ರಾಜ್ಯ, ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ) ಹಾಗೂ ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಇತರೆ ವೃತ್ತಿಪರ ತರಗತಿ, ಪ್ಯಾರಾ ಮೆಡಿಕಲ್ ಕೋರ್ಸ್, ಡಿಪ್ಲೋಮಾ, ಡಿಇಡಿ, ಸಿಪಿಇಡಿ, ಇತರೆ ತಾಂತ್ರಿಕ ತರಗತಿ, ಬಿ.ಎ., ಬಿ.ಎಸ್ಸಿ, ಬಿ.ಕಾಂ., ಬಿಬಿಎ, ಬಿಬಿಎಂ, ಬಿಸಿಎ, ಇತರೆ ಪದವಿ, ಎಂ.ಎ, ಎಂ.ಎಸ್ಸಿ, ಎಂ.ಎಸ್.ಡಬ್ಲ್ಯೂ, ಎಂ.ಬಿ.ಎ., ಎಂ.ಡಿ., ಎಂಪಿಇಡಿ, ಬಿ.ಎ., ಎಂಬಿಬಿಎಸ್, ಬಿಡಿಎಸ್, ಎಂ.ಟೆಕ್, ಎಂ.ಎ, ಎ.ಇಡಿ, ಎಂ.ಎಸ್., ಪಿಹೆಚ್‌ಡಿ, ಪೊಸ್ಟ್ ಡಾಕ್ಟರೇಟ್, ಇತರೆ ಯಾವುದೇ ಸ್ನಾತಕೋತ್ತರ ಪದವಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಶಿಷ್ಯವೇತನವನ್ನು ನೀಡಲಾಗುತ್ತಿದೆ.

ಅರ್ಹ ಫಲಾನುಭವಿಗಳು ನಿಗದಿತ ಅರ್ಜಿ ನಮೂನೆಯನ್ನು ಕಲಬುರಗಿ ಮಹಾನಗರ ಪಾಲಿಕೆಯ ಆವಕ ಶಾಖೆಯಿಂದ 2019ರ ಜೂನ್ 13 ರಿಂದ 30 ಪಡೆದು ಭರ್ತಿ ಮಾಡಿ ಅವಶ್ಯಕ ದಾಖಲೆಗಳೊಂದಿಗೆ ಅರ್ಜಿಯನ್ನು 2019ರ ಜೂನ್ 30ರ ಸಂಜೆ 5.30 ಗಂಟೆಯೊಳಗಾಗಿ ಸಲ್ಲಿಸಬೇಕು. ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲೆ ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಮಹಾನಗರ ಪಾಲಿಕೆಯ ಶೇ. 24.10ರ ಶಾಖೆಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here