ಕಲಬುರಗಿ: ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೂಡ್ಲಿಪೇಟೆ ಹಾಗೂ ರಾಜ್ಯ ಕಾರ್ಯದರ್ಶಿ ಮಂಡಳಿ ಸಮಿತಿ ಸದಸ್ಯ ಅಬ್ದುಲ್ ರಹೀಂ ಪಟೇಲ್ ರವರ ಉಪಸ್ಥಿತಿಯಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಉತ್ತರ ಕರ್ನಾಟಕದ ಜಿಲ್ಲೆಗಳ ನಾಯಕರ ಗ್ರಾಮ ಪಂಚಾಯ್ತಿ ಚುನಾವಣೆಯ ಅವಲೋಕನದ ವಿಷೇಶ ಸಭೆ ಜಿಲ್ಲಾ ಕಛೇರಿಯಲ್ಲಿ ಜರುಗಿತು.
ಸಭೆಯಲ್ಲಿ ಕಳೆದ ಹಲವು ದಿನಗಳಿಂದ ರಾಷ್ಟ್ರ ರಾಜಧಾನಿಯಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾನೂನುಗಳನ್ನು ಹಿಂಪಡೆಯಲು ಆಗ್ರಹಿಸಿ ಅನ್ನಧಾತರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹಕ್ಕೆ ಬೆಂಬಲ ವ್ಯಕ್ತಪಡಿಸಿ ಬೆಂಗಳೂರಿನ ಮೌರ್ಯ ಸರ್ಕಲ್ ನಲ್ಲಿ ಅಖಿಲ ಭಾರತ ಕಿಸಾನ್ ಸಂರ್ಷ ಸಮನ್ವಯ ಸಮಿತಿ ಮತ್ತು ಐಕ್ಯಹೋರಾಟ ಸಮಿತಿ ಆಶ್ರಯದಲ್ಲಿ ನಡೆಯುತ್ತಿರುವ ಧರಣಿ ಸತ್ಯಾಗ್ರಹ ಮತ್ತು ಜಿಲ್ಲೆಯಲ್ಲಿ ನಡೆಯುತ್ತಿರುವ ಹೋರಾಟದಲ್ಲಿ ಪಕ್ಷದ ನಾಯಕರುಗಳು ಸಕ್ರಿಯವಾಗಿ ಭಾಗವಹಿಸಬೇಕು ಎಂದು ನಿರ್ಣಯ ಕೈಗೊಳ್ಳಲಾಯಿತು.
ಕೇಂದ್ರ ಸರ್ಕಾರ ರೈತರಿಗೆ ಬೇಡವಾದ ಕಾನೂನುಗಳನ್ನು ಜಾರಿಗೆ ತಂದು ಕಾರ್ಪೊರೇಟ್ ಕಂಪೆನಿಗಳ ತಾಳಕ್ಕೆ ತಕ್ಕಂತೆ ಕುಣಿಯುತ್ತ ರೈತರ ಮರಣ ಶಾಸನ ಬರೆಯಲು ಪ್ರಯತ್ನಿಸುತ್ತಿರುವುದು ಖಂಡನೀಯ ಕೇಂದ್ರ ಸರ್ಕಾರ ಕೂಡಲೇ ರೈತ ವಿರೋಧಿ ಕೃಷಿ ಕಾನೂನುಗಳನ್ನು ಹಿಂಪಡೆಯಬೇಕೆಂದು ಸಭೆಯು ಆಗ್ರಹಿಸಿತು.
ಗುಲ್ಬರ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾ.ರಿಜ್ವಾನ್ ರವರು ಸ್ವಾಗತಿಸಿ ವಂದಿಸಿದರು ಸಭೆಯಲ್ಲಿ ಧಾರವಾಡ ಜಿಲ್ಲಾ ಅಧ್ಯಕ್ಷರಾದ ರಫೀಕ್ ಯಾದಗಿರಿ ಜಿಲ್ಲಾ ಅಧ್ಯಕ್ಷರಾದ ಖಾಲಿದ್ ಹುಸೇನ್ ರಾಯಚೂರು ಜಿಲ್ಲಾ ಅಧ್ಯಕ್ಷರಾದ ಡಾ. ಮಹ್ಮದ್ ಸುಹೇಲ್ ಉಪಸ್ಥಿತರಿದ್ದರು.
ಸಭೆಯಲ್ಲಿ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ನಂತರ ಪ್ರಥಮ ಬಾರಿಗೆ ಗುಲ್ಬರ್ಗ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಗುಲ್ಬರ್ಗ ಜಿಲ್ಲಾ ನಾಯಕರುಗಳು ಶಾಲು ಹೊದಿಸಿ ಸನ್ಮಾನಿಸಿದರು.