ಕೋವಿಡ್-19 ಲಸಿಕೆ: ಆರೋಗ್ಯ ಕಾರ್ಯಕರ್ತರ ಮೇಲೆ ಮೊದಲ ಪ್ರಯೋಗ: ಆರ್.ಸಿ.ಹೆಚ್.ಓ

0
418

ಕಲಬುರಗಿ: ಮಹಾಮಾರಿ ಕೊರೋನಾ ಸೋಂಕು ನಿಯಂತ್ರಣಕ್ಕೆ ಶೀಘ್ರದಲ್ಲಿಯೆ ಲಸಿಕೆ ಬರುವ ನಿರೀಕ್ಷೆಯ ಹಿನ್ನೆಲೆಯಲ್ಲಿ ಜನಸಾಮಾನ್ಯರ ಮೇಲೆ ಲಸಿಕೆ ಪ್ರಯೋಗ ಮಾಡುವ ಮುನ್ನ ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರ ಮೇಲೆ ಪ್ರಯೋಗ ಮಾಡಲು ಉದ್ದೇಶಿಸಿದ್ದು, ಇದಕ್ಕಾಗಿ ಜನವರಿ 2 ರಂದು ಕಲಬುರಗಿ ಜಿಲ್ಲೆಯಾದ್ಯಂತ ಮೂರು ಆರೋಗ್ಯ ಕೇಂದ್ರದಲ್ಲಿ ಕೋವಿಡ್ ಲಸಿಕೆ ನೀಡುವ ವಿಧಾನದ ಕುರಿತು “ಡ್ರೈ ರನ್” ನಡೆಸಲಾಗುತ್ತಿದೆ ಎಂದು ಜಿಲ್ಲಾ ಆರ್.ಸಿ.ಹೆಚ್.ಓ. ಅಧಿಕಾರಿ ಡಾ.ಪ್ರಭುಲಿಂಗ ಮಾನಕರ ತಿಳಿಸಿದ್ದಾರೆ.

ಕೊರೋನಾ ಲಸಿಕೆ ಬಂದ ಕೂಡಲೆ ಪ್ರಥಮ ಹಂತದಲ್ಲಿ ಸರ್ಕಾರಿ ಮತ್ತು ಖಾಸಗಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರು ಎಲ್ಲಾ ಹಂತದ ವೈದ್ಯ ಮತ್ತು ವೈದ್ಯೇತರ ಸಿಬ್ಬಂದಿ, ಆರೋಗ್ಯ ಇಲಾಖೆ ಸಿಬ್ಬಂದಿ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರಿಗೆ ಲಸಿಕೆ ನೀಡಲು ಉದ್ದೇಶಿಸಿ ಇವರ ವಿವರವನ್ನು ಈಗಾಗಲೆ ಕೋವಿಡ್ ವೆಬ್ ಪೋರ್ಟಲ್‍ನಲ್ಲಿ ಮಾಹಿತಿ ಅಪಲೋಡ್ ಮಾಡಲಾಗಿದ್ದು, ಇದಕ್ಕೆ ಪೂರ್ವ ಸಿದ್ಧತೆಯಾಗಿ ಶನಿವಾರ ಡ್ರೈ ರನ್ ಮಾಡಲಾಗುತ್ತಿದೆ.

Contact Your\'s Advertisement; 9902492681

ಡ್ರೈ ರನ್ ನಡೆಸಲು ರಾಜ್ಯದಲ್ಲಿ ಕಲಬುರಗಿ, ಬೆಳಗಾವಿ, ಮೈಸೂರು, ಬೆಂಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳು ಆಯ್ಕೆಯಾಗಿದ್ದು, ಶನಿವಾರ ಈ ಜಿಲ್ಲೆಗಳಲ್ಲಿ ಡ್ರೈ ರನ್ ನಡೆಯಲಿದೆ.

ಪ್ರತಿ ಜಿಲ್ಲೆಯಲ್ಲಿ ಮೂರು ಆರೋಗ್ಯ ಕೇಂದ್ರದಲ್ಲಿ ಡ್ರೈ ರನ್ ಆಯೋಜಿಸುವಂತೆ ರಾಜ್ಯ ಸರ್ಕಾರದ ಸೂಚನೆಯಂತೆ ಕಲಬುರಗಿ ನಗರದ ಅಶೋಕ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಕಲಬುರಗಿ ತಾಲೂಕಿನ ಅವರಾದ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಜೇವರ್ಗಿ ತಾಲೂಕಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿನ ಆರೋಗ್ಯ ಕಾರ್ಯಕರ್ತೆಯರಿಗೆ ಲಸಿಕೆ ನೀಡುವ ವಿಧಾನದ ಬಗ್ಗೆ ಪೂರ್ವಭ್ಯಾಸ ಮಾಡಲಾಗುತ್ತಿದೆ ಎಂದು ತಿಳಿಸಿರುವ ಆರ್.ಸಿ.ಹೆಚ್.ಓ. ಡಾ.ಪ್ರಭುಲಿಂಗ ಮಾನಕರ್ ಅವರು ಲಸಿಕೆ ನೀಡುವವರೊಂದಿಗೆ ನಾಲ್ಕು ಜನ ಸಹಾಯಕ ಸಿಬ್ಬಂದಿ ಕಾರ್ಯ ನಿರ್ವಹಿಸಲಿದ್ದಾರೆ ಎಂದಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here