ಕಲಬುರಗಿ: ಪ್ರತಿಯೊಂದು ಮಗುವಿಗೂ ದೈಹಿಕ, ಮಾನಸಿಕ ಅರೋಗ್ಯದ ಬಗ್ಗೆ ತಿಳುವಳಿಕೆ ನೀಡುವುದು ಅವಶ್ಯಕವಾಗಿದೆ ಎಂದು ಮಕ್ಕಳ ಹಕ್ಕುಗಳ ಆಯೋಗದ ಸದಸ್ಯೆ ಡಾ. ಜಯಶ್ರೀ ಚನ್ನಾಳ ಅವರು ತಿಳಿಸಿದರು.
ಗುರುವಾರ ಜಿಲ್ಲಾ ಪಂಚಾಯತ ನೂತನ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಪೆÇಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕಲಬುರಗಿ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಶಾಲಾ ಮಕ್ಕಳಿಗೆ ಮತ್ತು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಆರ್.ಟಿ.ಇ ಅನುμÁ್ಠನ, ಬಾಲ್ಯ ವಿವಾಹ, ಬಾಲಕಾರ್ಮಿಕ ಪೆÇೀಕ್ಸೋ ಕಾಯ್ದೆ ಮತ್ತು ಮಕ್ಕಳ ಭಿಕ್ಷಾಟನೆ ಕುರಿತ ಏರ್ಪಡಿಸಲಾಗಿದ್ದ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಮಕ್ಕಳ ಹಕ್ಕುಗಳು ಉಲ್ಲಂಘನೆಯಾದರೆ ಮಕ್ಕಳು ಬಾಲಕಾರ್ಮಿಕರು ಆಗುತ್ತಾರೆ. ಹೆಣ್ಣುಮಕ್ಕಳಿಗೆ ಬಾಲ್ಯ ವಿವಾಹ ಮಾಡುತ್ತಾರೆ. ಇಂತಹ ಹಲವು ರೀತಿಯಲ್ಲಿ ಮಕ್ಕಳಿಗೆ ಸಮಸ್ಯೆಗಳು ಬರುತ್ತವೆ. ಇವೆಲ್ಲವುಗಳಿಂದ ತಪ್ಪಿಸಲು ಶಿಕ್ಷಣ ಹಕ್ಕು (ಆರ್.ಟಿ.ಇ) ಕಾಯ್ದೆ ಉಪಯೋಗಿಸಿ ಮಕ್ಕಳ ಬದುಕನ್ನು ರಕ್ಷಿಸಬೇಕು ಎಂದು ಹೇಳಿದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಪಿ ಬಾಡಂಗಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಮನುಷ್ಯನಿಗೆ ಜೀವಿಸುವ ಹಕ್ಕು ಇದ್ದಹಾಗೇ ಮಕ್ಕಳು ಶಿಕ್ಷಣ ಪಡೆಯುವುದು ಸಹ ಅμÉ್ಟೀ ಮುಖ್ಯವಾಗಿದೆ. ಮಕ್ಕಳು ಭವ್ಯಭಾರತದ ಪ್ರಜೆಗಳು ಅವರಿಗೆ ಸರಿಯಾದ ಶಿಕ್ಷಣದ ಅವಶ್ಯಕತೆ ಇದೆ ಎಂದರು.
ಸಭೆಯಲ್ಲಿ ಹಿರಿಯ ಪೆÇಲೀಸ್ ಮಕ್ಕಳ ಕಲ್ಯಾಣಾಧಿಕಾರಿ ಸಂಗಮನಾಥ ಹಿರೇಮಠ, ಬಾಲ ನ್ಯಾಯ ಮಂಡಳಿಯ ಸದಸ್ಯೆ ಗೀತಾ ಸಜ್ಜನಶೆಟ್ಟಿ, ವಿಷಯ ಪರಿವೀಕ್ಷಕ ನಾಗೇಂದ್ರಪ್ಪ ಅವರಾದ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಶರಣಬಸಪ್ಪ ಬೆಳಗುಂಪಿ, ಕಾನೂನು ಮತ್ತು ಪರಿವೀಕ್ಷಣಾಧಿಕಾರಿ ಹಾಗೂ ವಿವಿಧ ಶಾಲಾ ಶಿಕ್ಷಕರು ಮತ್ತು ಮಕ್ಕಳು ಉಪಸ್ಥಿತರಿದ್ದರು.