ಮೊದಲ ಹಂತದಲ್ಲಿ 17,742 ಫಲಾನುಭವಿಗಳಿಗೆ ಕೋವಿಡ್-19 ಲಸಿಕೆ 

0
44

ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೇಂದ್ರ ಸರ್ಕಾರ ಆದೇಶ ಬಂದ ನಂತರ ನೋಂದಣಿ ಮಾಡಿಕೊಂಡಿರುವ ಎಲ್ಲಾ 17,742 ಫಲಾನುಭವಿಗಳಿಗೆ ಮೊದಲ ಹಂತದಲ್ಲಿ  ಕೋವಿಡ್-19 ಲಸಿಕೆ ನೀಡಲಾಗುವುದು ಎಂದು ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಸ್ನೇಹಲ್ ಸುಧಾಕರ ಲೋಖಂಡೆ ಅವರು ತಿಳಿಸಿದ್ದಾರೆ.

ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಬುಧವಾರ ಕೋವಿಡ್-19 ಲಸಿಕೆ ನೀಡುವ ಕುರಿತಾದ ಪಾಲಿಕೆಯ ಕಾರ್ಯಪಡೆ (ಟಾಸ್ಕ್ ಫೆÇೀರ್ಸ್) ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡುತ್ತಿದ್ದರು.

Contact Your\'s Advertisement; 9902492681

ಲಸಿಕೆ ವಿವರ ಹಾಗೂ ನೀಡುವ ದಿನಾಂಕ ಭಾರತ ಸರ್ಕಾರದಿಂದ ಮಾಹಿತಿ ಬಂದಿರುವುದಿಲ್ಲ ಎಂದು ಅವರು ಹೇಳಿದರು.

ಸರ್ಕಾರಿ ಮತ್ತು ಖಾಸಗಿ ವೈದ್ಯರು, ನರ್ಸ್, ವೈದ್ಯಕೀಯ ವಿದ್ಯಾರ್ಥಿಗಳು, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಎಲ್ಲಾ ನೋಂದಾಯಿತ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲಾಗುವುದು ಎಂದು ಅವರು ತಿಳಿಸಿದರು.

ಹೆಸರು ನೋಂದಣಿ ಸಂದರ್ಭದಲ್ಲಿ ಯಾವ ಗುರುತಿನ ಚೀಟಿಯ ಮಾಹಿತಿ ಅಪ್‍ಲೋಡ್ ಮಾಡಲಾಗಿದೆಯೋ (ಆಧಾರ ಕಾರ್ಡ್ ಹೊರತುಪಡಿಸಿ) ಅಂತಹ ಗುರುತಿನ ಪತ್ರ ತೋರಿಸಿ ಆರೋಗ್ಯ ಕಾರ್ಯಕರ್ತರು ಲಸಿಕೆ ಪಡೆಯುಬಹುದಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಕೋವಿಡ್-19 ಲಸಿಕೆ ನೀಡುವ ವಿಧಾನ ಕುರಿತು ಡಬ್ಲ್ಯೂಟಿಓ ಕಣ್ಗಾವಲು ವೈದ್ಯಕೀಯ ಕಚೇರಿಯ ಅಧಿಕಾರಿ ಡಾ. ಅನಿಲಕುಮಾರ ಎಸ್. ತಾಳಿಕೋಟಿ ಅವರು ಪಿಪಿಟಿ ಮೂಲಕ ಮಾಹಿತಿ ನೀಡಿದರು.

ಈ ಸಭೆಯಲ್ಲಿ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಜಶೇಖರ ಮಾಲಿ, ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯ ಶಸ್ತ್ರಚಿಕಿತ್ಸಕ ಡಾ. ಎ. ಎಸ್. ರುದ್ರವಾಡಿ, ಆರ್‍ಸಿಎಚ್ ಅಧಿಕಾರಿ ಡಾ. ಪ್ರಭುಲಿಂಗ ಮಾನಕರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here