ಚಲನಚಿತ್ರ ನಿರ್ದೇಶನ, ಛಾಯಾಗ್ರಹಣ, ವಿಡಿಯೋ ಸಂಕಲನ, ಸ್ಕ್ರಿಪ್ಟ್ ತಯಾರಿಕೆ, ಉಚಿತ ಅರ್ಜಿ ಆಹ್ವಾನ

0
149

ಬೆಂಗಳೂರು: ಕರ್ನಾಟಕ ಚಲನಚಿತ್ರ ಅಕಾಡೆಮಿ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ 30 ವರ್ಷ ವಯೋಮಿತಿಯೊಳಗಿನ ಯುವತಿ/ಯುವಕರಿಗೆ ಚಲನಚಿತ್ರ ನಿರ್ದೇಶನ, ಛಾಯಾಗ್ರಹಣ, ವಿಡಿಯೋ ಸಂಕಲನ, ಸ್ಕ್ರಿಪ್ಟ್ ತಯಾರಿಕೆ, ಅಭಿನಯ ಇತ್ಯಾದಿಗಳ ಕುರಿತು ವಸತಿ ಸಹಿತ ಉಚಿತ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಚಲನಚಿತ್ರ ಕ್ಷೇತ್ರದ ಬಗ್ಗೆ ಆಸಕ್ತಿ ಹೊಂದಿರುವ 30 ವರ್ಷ ವಯೋಮಿತಿಯೊಳಗಿನ ಯಾವುದೇ ಪದವೀಧರ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಯುವಕ/ಯುವತಿಯರು ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿ ನಮೂನೆಯನ್ನು ಅಕಾಡೆಮಿ ವೆಬ್ ಸೈಟ್ ತಿತಿತಿ.ಞಛಿಚಿiಟಿಜಿo.iಟಿ ಇಲ್ಲಿ ಡೌನ್ ಲೋಡ್ ಮಾಡಬಹುದು ಅಥವಾ ಕರ್ನಾಟಕ ಚಲನಚಿತ್ರ ಅಕಾಡೆಮಿಯ ಕಚೇರಿಯಿಂದ ಖುದ್ದು ಪಡೆಯಬಹುದಾಗಿದೆ.

Contact Your\'s Advertisement; 9902492681

ಪದವಿಯಲ್ಲಿ ಪಡೆದಿರುವ ಸರಾಸರಿ ಅಂಕದ ಜೇಷ್ಠತೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ತರಬೇತಿಗೆ ಆಯ್ಕೆ ಮಾಡಲಾಗುವುದು. ಭರ್ತಿ ಮಾಡಿದ ಅರ್ಜಿಗಳನ್ನು ದಿನಾಂಕ: 20.01.2021 ರಂದು ಸಂಜೆ 5.00 ಘಂಟೆಯೊಳಗೆ ಅರ್ಜಿಯಲ್ಲಿ ತಿಳಿಸಿರುವ ದಾಖಲಾತಿಗಳೊಂದಿಗೆ ರಿಜಿಸ್ಟಾರ್, ಕರ್ನಾಟಕ ಚಲನಚಿತ್ರ ಅಕಾಡೆಮಿ, ಕನ್ನಡ ಚಲನಚಿತ್ರ ಅಮೃತೋತ್ಸವ ಭವನ, #20/ಎ, ನಂದಿನಿ ಲೇಔಟ್, ಪ್ರೆಸಿಡೆನ್ಸಿ ಶಾಲೆ ಪಕ್ಕ, ಬೆಂಗಳೂರು-560 096. ವಿಳಾಸಕ್ಕೆ ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿರುವ 20.01.2021 ಕ್ಕೆ 30 ವರ್ಷ ವಯಸ್ಸಿನ ಒಳಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕೊನೆ ದಿನಾಂಕದ ನಂತರ ಸ್ವೀಕರಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ 080-23493410 ಕ್ಕೆ ಕಚೇರಿ ಅವಧಿಯಲ್ಲಿ ಸಂಪರ್ಕಿಸಲು ಕೋರಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here