ಕಲಬುರಗಿ: ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಅಲ್ಲಮಪ್ರಭು ಪಾಟೀಲ್ ಅವರು ದಕ್ಷಿಣ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಕಾಂಗ್ರೆಸ್ ಬೆಂಬಲಿತ ನೂತನ ಗ್ರಾಪಂ ಪಂಚಾಯಿತಿ ಸದಸ್ಯರುಗಳಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಮೀಸಲಾತಿಯ ಬಗ್ಗೆ ಸವಿಸ್ತರವಾಗಿ ತರಬೇತಿ ನೀಡಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಗದೇವ ಗುತ್ತೇದಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ನೀಲಕಂಠರಾವ ಮೂಲಗೆ, ದಶರಥ ಬಾಬು ಒಂಟಿ, ವಾಣಿಶ್ರೀ ಸಗರಕರ, ಶಿವಾನಂದ ಹೊನಗುಂಟಿ, ಹಾಗೂ ಪಾಣೆಗಾವ ತಾಂಡದ ನೂತನ ಗ್ರಾಮ ಪಂಚಾಯಿತಿ ಸದಸ್ಯರಾದ ಕಿಶನ್ ಗುಂಡು ರಾಠೋಡ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು. ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.