ಶಹಾಬಾದ: ಸರಕಾರಿ ನೌಕರರು ಭ್ರಷ್ಟಾಚಾರದಲ್ಲಿ ತೊಡಗಿರುವುದು ಕಂಡು ಬಂದರೆ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ಸಲ್ಲಿಸಲು ಸಾರ್ವಜನಿಕರು ಮುಂದಾಗಬೇಕು ಎಂದು ಭ್ರಷ್ಟಾಚಾರ ನಿಗ್ರಹ ದಳದ ಆರಕ್ಷಕ ಮಹ್ಮದ್ ಇಸ್ಮಾಯಿಲ್ ತಿಳಿಸಿದರು.
ಅವರು ಶುಕ್ರವಾರ ನಗರದ ಪ್ರವಾಸಿ ಮಂದಿರದಲ್ಲಿ ಭ್ರಷ್ಟಾಚಾರ ನಿಗ್ರಹ ದಳದಿಂದ ಆಯೋಜಿಸಲಾದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದರು.
ಸರಕಾರಿ ಅಧಿಕಾರಿಗಳು ಕೆಲಸ ಮಾಡಿಕೊಡಲು ಹಣ ಕೇಳಿದರೆ, ಕೆಲಸ ಮಾಡಿಕೊಡಲು ವಿಳಂಬ ಮಾಡಿದರೆ, ಸಾರ್ವಜನಿಕ ಕೆಲಸಕ್ಕೆ ಲಂಚದ ಹಣಕ್ಕಾಗಿ ಒತ್ತಾಯಿಸುವುದು, ಲಂಚ ರೂಪದಲ್ಲಿ ಬೇರೆ ಪ್ರತಿಫಲ ಪಡೆಯುವುದು, ಅಥವಾ ಸರಕಾರಿ ಸ್ವತ್ತನ್ನು ಕಾನೂನು ಬಾಹಿರವಾಗಿ ಖಾಸಗಿ ವ್ಯಕ್ತಿಗಳಿಗೆ ಖಾತೆ ಮಾಡಿಕೊಟ್ಟರೆ ಎಸಿಬಿಗೆ ದೂರು ನೀಡಬಹುದು. ಅಲ್ಲದೇ ಕೆಲಸವನ್ನು ಅನಗತ್ಯವಾಗಿ ವಿಳಂಬ ಮಾಡುವುದು, ತನ್ನ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು ಅವ್ಯವಹಾರದಲ್ಲಿ, ಕಾನೂನು ಬಾಹಿರ ಕೃತ್ಯದಲ್ಲಿ ತೊಡಗಿದ್ದರೇ, ಅಕ್ರಮ ಆಸ್ತಿ ಹೊಂದಿದ್ದರೇ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ೧೯೮೮ ರ ಅನ್ವಯ ಅಪರಾಧವಾಗುತ್ತದೆ. ಇಂತಹ ವ್ಯಕ್ತಿಗಳು ಇದ್ದರೇ ಅವರ ವಿರುದ್ಧ ದೂರು ನೀಡಬಹುದು. ದೂರು ನೀಡಿದವರ ಹೆಸರನ್ನು ಗೌಪ್ಯವಾಗಿಡಲಾಗುವುದು. ಅವರಿಗೆ ಸೂಕ್ತ ರಕ್ಷಣೆ ಒದಗಿಸುತ್ತೆವೆ. ಸಾರ್ವಜನಿಕರು ನಿರ್ಭಯವಾಗಿ ಮುಂದೆ ಬಂದು ಭ್ರಷ್ಟಾಚಾರ ನಿರ್ಮೂಲನೆಗೆ ಸಹಕರಿಸಬೇಕು ಎಂದು ಕೋರಿದರು.
ಭ್ರಷ್ಟಾಚಾರ ನಿಗ್ರಹ ದಳಕ್ಕೆ ಸಂಬAಧಿಸಿದAತೆ ಮಾಹಿತಿ ಇದ್ದರೇ ಅಥವಾ ದೂರು ದಾಖಲಿಸಲು ಎಸಿಬಿ ಡಿವೈಎಸ್‌ಪಿ-೯೪೮೦೮೦೬೨೪೦, ಪಿಐ-೯೪೮೦೮೮೬೩೦೯, ೯೪೮೦೮೦೬೩೧೦, ಸ್ಥಿರ ದೂರವಾಣಿ-೦೮೪೭೨-೨೭೦೬೪೧ ದೂರು ನೀಡಿ ಅಥವಾ ಮಾಹಿತಿ ನೀಡಿ ಸಹಕರಿಸಬೇಕೆಂದು ಮನವಿ ಮಾಡಿದ್ದಾರೆ.
ಭ್ರಷ್ಟಾಚಾರ ನಿಗ್ರಹ ದಳದ ಸಿಬ್ಬಂದಿಗಳಾದ ಶರಣಬಸವ, ಮಹೇಂದ್ರ, ಕರ್ನಾಟಕ ಪ್ರಾಂತ ರೈತ ಸಂಘದ ತಾಲೂಕಾ ಸಂಚಾಲಕ ರಾಯಪ್ಪ ಹುರಮುಂಜಿ, ಕರವೇ ತಾಲೂಕಾ ಸಂಚಾಲಕ ವಿಶ್ವರಾಜ ಫಿರೋಜಬಾದ, ಶಿವಕುಮಾರ ಕಾರೊಳ್ಳಿ, ಆಶಪ್ಪ ಭಜಂತ್ರಿ, ಭೂತಾಳಿ ಪೂಜಾರಿ,ರಷೀದ್ ಪಟೇಲ್, ಶಿವಕುಮಾರ ಗೋಳಾ(ಕೆ) ಇತರರು ಇದ್ದರು.