ಕಲಬುರಗಿ: 1956 ರಲ್ಲಿ ಭಾಷಾವಾರು ಪ್ರಾಂತ್ಯದ ವರದಿಯ ಆಧಾರದಂತೆ ಮಹಾಜನ ವರದಿಯಲ್ಲಿ ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂದು ಹೇಳಿರುವುದು ಗಡಿ ವಿವಾದ ಮುಗಿದ ಅಧ್ಯಾಯವಾಗಿದೆ, ಆದರೂ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ ಠಾಕ್ರೆ ಅವರು ಬೆಳಗಾವಿ ಕರ್ನಾಟಕದ ಆಕ್ರಮಿತ ಪ್ರದೇಶ ಎಂದು ಹೇಳಿರುವುದು ಅರ್ಥಹೀನ ಎಂದು ಬಿಜೆಪಿ ಮುಖಂಡ ಹಾಗೂ ಕಲಬುರಗಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಅಂಬಾರಾಯ ಅಷ್ಠಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಬೆಂಬಲದೊಂದಿಗೆ ಅಧಿಕಾರಕ್ಕೆ ಬಂದಿರುವ ಠಾಕ್ರೆ ಯವರು ಈ ರೀತಿ ವಿವಾದಾತ್ಮಕ ಹೇಳಿಕೆ ನೀಡುತ್ತಿರುವುದು ಒಕ್ಕೂಟ ವ್ಯವಸ್ಥೆಯ ವಿರುದ್ಧ ನಿಲುವಾಗಿದೆ. ಕಾಂಗ್ರೆಸ್ ಪಕ್ಷಕ್ಕೆ ಕನ್ನಡ ನಾಡು-ನುಡಿ, ನೆಲ-ಜಲದ ಬಗ್ಗೆ ಕಿಂಚಿತ್ತೂ ಕಾಳಜಿ ಇದ್ದರೆ ಕೂಡಲೇ ಮಹಾರಾಷ್ಟ್ರ ಸರ್ಕಾರಕ್ಕೆ ನೀಡಿದ ಬೆಂಬಲ ವಾಪಸ್ ಪಡೆಯಬೇಕೆಂದು ಅಂಬಾರಾಯ ಅಷ್ಠಗಿ ಆಗ್ರಹಿಸಿದ್ದಾರೆ.