ವಕ್ಫ್ ಆಸ್ತಿ ಒತ್ತುವರಿ, ಅಲ್ಪಸಂಖ್ಯಾತರ ಇಲಾಖೆಯ ಅನುದಾನ ಕಡಿತವಿರೋಧಿಸಿ ಪ್ರತಿಭಟನೆ

0
61

ಕಲಬುರಗಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಹಾಯಧನ ಕಡಿತಗೊಳಿಸಿದನ್ನು ವಿರೋಧಿಸಿ, ಕೂಡಲೇ ಸಹಾಯಧನ ಬಿಡುಗಡೆಗೆ ಆಗ್ರಹಿಸಿ ಹಾಗೂ ವಕ್ಫ್ ಆಸ್ತಿ ಒತ್ತುವರಿ ಸೂಕ್ತ ತನಿಖೆಗೆ ಒತ್ತಾಯಿಸಿ ಸಿಪಿಐಎಂ ಕಾರ್ಯಕರ್ತರು ವಕ್ಫ್ ಕಚೇರಿಗೆ ಘೆರಾವ್ ಪ್ರತಿಭಟನೆ ನಡೆಸಿದರು.

ಅಲ್ಪಸಂಖ್ಯಾತರ ಇಲಾಖೆಯ ಅನುದಾನ ಕಡಿತಗೊಳಿಸಿ ರಾಜ್ಯ ಸರಕಾರ ಅಲ್ಪಸಂಖ್ಯಾತ ಸಮುದಾಯವನ್ನು ಅಭದ್ರಗೊಳಿಸಿವುದಾಗಿದೆ. ಈ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಕಾಳಜಿ ಬಗ್ಗೆ ಅನುಮಾನಗಳು ಉಂಟಾಗಿದೆ ಎಂದು ಪ್ರತಿಭಟನಾ ನಿರತ ಹೋರಾಟಗಾರರು ಅಸಮಧಾನ ವ್ಯಕ್ತಪಡಿಸಿದರು.

Contact Your\'s Advertisement; 9902492681

ಅಲ್ಲದೆ ರಾಜ್ಯ ಸರಕಾರ ವಿವಾದಿತ ಗೋವು ಹತ್ಯೆ ನಿಷೇಧ ಕಾಯ್ದೆ ಜಾರಿಗೆ ತಂದು ಬಡ ರೈತ ಸಮುದಾಯದಕ್ಕೆ ಇಕ್ಕಟ್ಟಿಗೆ ಸಿಲುಕಿಸಿದ್ದಲ್ಲದೆ, ಅಮಾಯಕ ಮುಸ್ಲಿಂ ಸಮುದಾಯಕ್ಕೆ ಟಾರ್ಗೆ ಮಾಡಲು ಈ ಕಾಯ್ದೆ ಜಾರಿಗೆ ತರಲಾಗಿದೆ. ಗೋವು ಮೇಲೆ ಅಷ್ಟೊಂದು ಪ್ರೀತಿ ಇದರೆ ಗೋವು ಮಾಂಸ ರಫ್ತು ಮಾಡುವುದು ನಿಷೇಧಿಸಲ್ಲಿ ಎಂದು ಒತ್ತಾಯಿಸಿದರು.

ಜಿಲ್ಲೆಯಲ್ಲಿ ವಕ್ಫ್ ಆಸ್ತಿ ಒತ್ತುವರಿ ಪ್ರಾಮಣ ಏರಿಕೆಯಾಗುತ್ತಿದ್ದು, ಸೂಕ್ತ ತನಿಖೆ ನಡೆಸಿ ವಕ್ಫ್ ಆಸ್ತಿ ವಾಪಸ್ಸ್ ಪಡೆದು ಆಸ್ತಿ ಒತ್ತುವರಿ ಮಾಡಿದವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಶರಣಬಸಪ್ಪ ಮಮಶೇಟಿ, ಮಾನವ ಹಕ್ಕುಗಳ ಹೋರಾಟಗಾರರಾದ ಮಹ್ಮದ್ ರೀಯಾಜ್ ಖತೀಬ್ ಸೇರಿದಂತೆ ಹಲವು ಹೋರಾಟಗಾರರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here