ಸರಕಾರಕ್ಕೆ ಎಐಡಿಎಸ್‌ಒ ಮನವಿ

0
28

ವಾಡಿ: ಶೈಕ್ಷಣಿಕ ವರ್ಷ ಪೂರ್ಣಗೊಳ್ಳುತ್ತಿದ್ದರೂ ಸರಕಾರ ನಗರ ಪ್ರದೇಶಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ಬೇಡಿಕೆ ಈಡೇರಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಎಐಡಿಎಸ್‌ಒ ಕಾರ್ಯಕರ್ತರು ಶುಕ್ರವಾರ ಪುರಸಭೆ ಮುಖ್ಯಾಧಿಕಾರಿ ವಿಠ್ಠಲ ಹಾದಿಮನಿ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿಪತ್ರ ಸಲ್ಲಿಸಿದರು.

ಎಲ್ಲಾ ವಿದ್ಯಾರ್ಥಿಗಳ ಶಿಷ್ಯ ವೇತನ ಬಿಡುಗಡೆ ಮಾಡಬೇಕು. ವಸತಿನಿಲಯಗಳನ್ನು ತೆರೆಯಬೇಕು ಮತ್ತು ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು. ಗ್ರಾಮೀಣ ಮತ್ತು ನಗರ ಪ್ರದೇಶದ ವಿದ್ಯಾರ್ಥಿಗಳಿಗಾಗಿ ಸಮರ್ಪಕ ಬಸ್ ಸೌಲಭ್ಯ ಒದಗಿಸಬೇಕು ಹಾಗೂ ಹೆಚ್ಚುವರಿ ಶುಲ್ಕ ಪಡೆಯುವುದನ್ನು ನಿಲ್ಲಿಸಬೇಕು. ಕಾಲೇಜುಗಳಲ್ಲಿ ಅಗತ್ಯವಿರುವ ಬೋಧಕರನ್ನು ನೇಮಿಸಿಕೊಳ್ಳಬೇಕು ಎಂದು ಆಗ್ರಹಿಸಿದರು.

Contact Your\'s Advertisement; 9902492681

ಎಐಡಿಎಸ್‌ಒ ಅಧ್ಯಕ್ಷ ಗೌತಮ ಪರತೂರಕರ, ಕಾರ್ಯದರ್ಶಿ ವೆಂಕಟೇಶ ದೇವದುರ್ಗಾ, ಗೋವಿಂದ ಯಾಳವಾರ, ದತ್ತು ಹುಡೇಕರ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here