ಶಹಾಪುರ: ಸಗರದ ಕಲಾನಿಕೇತನ ಟ್ರಸ್ಟ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಯಾದಗಿರಿ ವತಿಯಿಂದ ನಗರದ ದೇಶಮುಖ್ ಬಡಾವಣೆಯಲ್ಲಿರುವ ತಾಲ್ಲೂಕು ಕನ್ನಡ ಸಾಹಿತ್ಯ ಭವನದಲ್ಲಿ ರವಿವಾರದಂದು ಬೆಳಿಗ್ಗೆ ೧೦.೩೦ ಕ್ಕೆ ಸಂಗೀತೋತ್ಸವ ಹಾಗೂ ನಾಡಿನ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್ ನ ಅಧ್ಯಕ್ಷರಾದ ಬಸವರಾಜ ಸಿನ್ನೂರ ಪ್ರಕಟಣೆಗೆ ತಿಳಿಸಿದ್ದಾರೆ.
ಕಾರ್ಯಕ್ರಮವನ್ನು ಶಾಸಕ ಶರಣಬಸ್ಸಪ್ಪಗೌಡ ದರ್ಶನಾಪುರ ಉದ್ಘಾಟಿಸಲಿದ್ದು.ಒಳಿತು ಮಾಡು ಮನುಸ ಗೀತ ಖ್ಯಾತಿಯ ಸಾಹಿತಿ ನಮ್ ಋಷಿ,ನಾಡಿನ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ,ಖ್ಯಾತ ಹಾಸ್ಯ ಕಲಾವಿದರಾದ ಬಸವರಾಜ ಮಹಾಮನಿ ಹಾಗೂ ಚುಟು ಚುಟು ಅಂತೈತಿ ಗೀತ ಖ್ಯಾತಿಯ ಸಾಹಿತಿ ಶಿವು ಭೇರ್ಗಿ ವಿಶೇಷ ಆಹ್ವಾನಿತರಾಗಿ ಆಗಮಿಸಲಿದ್ದಾರೆ,ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಸಿದ್ದಲಿಂಗಣ್ಣ ಆನೇಗುಂದಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಳ್ಳಲಿದ್ದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೊಟ್ರೇಶ್ ಮರಬನಳ್ಳಿ,ಯಾದಗಿರಿ ನಗರಸಭೆಯ ಪೌರಾಯುಕ್ತರಾದ ಎಚ್. ಬಕ್ಕಪ್ಪ,ಕಲಬುರ್ಗಿಯ ವೃತ್ತ ವಿಜಯ ಕರ್ನಾಟಕ ಪತ್ರಿಕೆಯ ಉಪಸಂಪಾದಕರಾದ ಪ್ರಕಾಶ್ ದೊರೆ,ಯಾದಗಿರಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಇಂದೂಧರ ಸಿನ್ನೂರ,ಯುವ ಮುಖಂಡರಾದ ದೇವಿಂದ್ರಪ್ಪ ತೋಟಗೇರ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ವಿಶೇಷವಾಗಿ ಇಪ್ಪತ್ತಕ್ಕೂ ಹೆಚ್ಚು ಯುವ ಸಂಗೀತ ಕಲಾವಿದರಿಗೆ ವೇದಿಕೆಯನ್ನು ಕಲ್ಪಿಸಿಕೊಟ್ಟು ಅವರಿಗೆ ಸ್ಫೂರ್ತಿ ನೀಡುವ ಸದುದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ,ಜೊತೆಗೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಆದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಲಾವಿದರು ಕಲಾಸಕ್ತರು ಕನ್ನಡ ಪ್ರೇಮಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಟ್ರಸ್ಟಿನ ಕಾರ್ಯದರ್ಶಿ ಗಳಾದ ವೀರಭದ್ರಯ್ಯಸ್ವಾಮಿ ಹೈಯಾಳ ಹಾಗೂ ಸೂಗುರೇಶ ಗಣಾಚಾರಿಮಠ ತಿಳಿಸಿದ್ದಾರೆ.