ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಿಂದ 2019ನೇ ಸಾಲಿನ ವಿವಿಧ ಇಲಾಖೆಯಲ್ಲಿ ಖಾಲಿಯಿರುವ ಪ್ರಥಮ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಜ.24 (ಭಾನುವಾರ) ದಂದು ನಡೆಯಬೇಕಿದ್ದ ಎರಡು ಅಧಿವೇಶನದಲ್ಲಿ ನಡೆಯಬೇಕಿದ್ದ ಸ್ಪರ್ಧಾತ್ಮಕ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದು, ಈ ಹಿನ್ನಲೆಯಲ್ಲಿ ಪರೀಕ್ಷೆ ಮುಮದೂಡಲಾಗಿದೆ ಎಂದು : ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಜಿ ಸತ್ಯವತಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2019ನೇ ಸಾಲಿನ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ. ದಿನಾಂಕ:23-01-2021ರಂದು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯನ್ನು ಮತ್ತು ದಿನಾಂಕಃ24-01-2020ರಂದು ಎರಡು ಅಧಿವೇಶನಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ನಿಗದಿಪಡಿಸಲಾಗಿತ್ತು.
ಏತನ್ಮಧ್ಯೆ, ದಿನಾ೦ಕ:23-01-2020ರಂದು ಬಲ್ಲ ಮೂಲಗಳಿಂದ ಸ್ವೀಕೃತಗೊ೦ಡ ಮಾಹಿತಿಯ ಪ್ರಕಾರ ದಿನಾ೦ಕ:24-01-2021ರಂದು ಎರಡು ಅಧಿವೇಶನಗಳಲ್ಲಿ ನಡೆಯಬೇಕಾಗಿದ್ದ, ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆಗಳು ಕೆಲವೊಂದು ದುಷ್ಕರ್ಮಿಗಳ ಕೈಸೇರಿರುವುದು ತಿಳಿದುಬಂದಿರುವ ಹಿನ್ನೆಲೆಯಲ್ಲಿ, ದಿನಾ೦ಕ:24-01-2021ರಂದು ನಡೆಯಬೇಕಾಗಿದ್ದ 2019ನೇ ಸಾಲಿನ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ.
ಮುಂದುವರೆದು, ಸ್ಪರ್ಧಾತ್ಮಕ ಹರೀಕ್ಷೆಗಳ ದಿನಾಂಕವನ್ನು ಮುಂದಿನ ದಿನಾಂಕ ನಂತರ ತಿಳಿಸಲಾಗುವುದು ಎಂದು ಆಯೋಗದ ಕಾರ್ಯದರ್ಶಿ ಜಿ.ಸತ್ಯವತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.