ಬೀದಿ ಬದಿ ವ್ಯಾಪಾರಿಗಳು ಡಿಜಿಟಲ್ ವಹಿವಾಟಿನಿಂದ ಕ್ಯಾಶ್ ಬ್ಯಾಕ್ ಪಡೆಯಲು ಅವಕಾಶ-ಗುರಲಿಂಗಪ್ಪ

0
80

ಶಹಾಬಾದ: ಕೋವಿಡ್-೧೯ ಸಂದರ್ಭದಲ್ಲಿ ಸಂಕಷ್ಟಕ್ಕೆ ಒಳಗಾದ ಬೀದಿ ಬದಿ ವ್ಯಾಪಾರಿಗಳಿಗೆ ಮತ್ತೆ ವ್ಯಾಪಾರ ಪ್ರಾರಂಭಿಸಲು ಕೇಂದ್ರ ಸರಕಾರ ೧೦ ಸಾವಿರ ರೂಪಾಯಿವರೆಗೆ ಆರ್ಥಿಕ ಸೌಲಭ್ಯ ನೀಡಿದೆ ಎಂದು ನಗರಸಭೆಯ ಪೌರಾಯುಕ್ತ ಡಾ.ಕೆ.ಗುರಲಿಂಗಪ್ಪ ಹೇಳಿದರು.

ಅವರು ನಗರಸಭೆ ಸಭಾಂಗಣದಲ್ಲಿ ಆಯೋಜಿಸಿದ್ದ ಬೀದಿ ವ್ಯಾಪಾರಿಗಳ ಆತ್ಮ ನಿರ್ಭರ ಯೋಜನೆಯಡಿ ಡಿಜಿಟಲ್ ವಹಿವಾಟಿನ ವಿಶೇಷ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

Contact Your\'s Advertisement; 9902492681

ಬೀದಿ ಬದಿ ವ್ಯಾಪಾರಿಗಳು ಡಿಜಿಟಲ್ ವಹಿವಾಟಿನಿಂದ ೧೦೦ ರವರೆಗೆ ಕ್ಯಾಶ್ ಬ್ಯಾಕ್ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಬೀದಿ ಬದಿ ವ್ಯಾಪಾರಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಎಸ್‌ಬಿಐ ವ್ಯವಸ್ಥಾಪಕ ವಿ.ನಾಗರಾಜ ಮಾತನಾಡಿ, ಬೀದಿ ಬದಿ ವ್ಯಾಪಾರಿಗಳು ಸಾಲ ಮರುಪಾವತಿ ಜತೆಗೆ ಪರಿಸರ ಸಂರಕ್ಷಣೆ, ಆಹಾರ ಪದಾರ್ಥಗಳ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದರು.

ಕೌಶಲ್ಯ ಮಿಷನ್‌ನ ಜಿಲ್ಲಾ ವ್ಯವಸ್ಥಾಪಕರಾದ ರಾಜಕುಮಾರ ಗುತ್ತೆದಾರ ಹಾಗೂ ಸಾತಯ್ಯ ಹಿರೇಮಠ ಮಾತನಾಡಿ,ಬೀದಿ ಬದಿ ವ್ಯಾಪಾರಿಗಳಿಗೆ ನೆರವಾಗಲೆಂದು ಕೇಂದ್ರ ಸರಕಾರ ‘ಆತ್ಮನಿರ್ಭರ ಯೋಜನೆ’ಯಡಿ ಬಡ್ಡಿ ರಹಿತ ಸಾಲ ನೀಡುತ್ತಿದೆ. ರಸ್ತೆ ಬದಿಯಲ್ಲಿ ತಳ್ಳುಬಂಡಿ, ಆಟೊಗಳಲ್ಲಿ ತಿಂಡಿ, ಊಟ ಹಾಗೂ ಪಾನೀಯ ಪದಾರ್ಥಗಳನ್ನು ಮಾರಾಟ ಮಾಡುವವರು ಮತ್ತು ಮನೆಗಳ ಬಳಿ ತೆರಳಿ ತರಕಾರಿ, ಹೂ, ಕಾಯಿ ಮಾರುವವರು ಮತ್ತು ರಸ್ತೆ ಬದಿಯಲ್ಲಿ ಬುಟ್ಟಿ ವ್ಯಾಪಾರಿಗಳು ಈ ಸಾಲ ಸೌಲಭ್ಯ ಪಡೆಯಬಹುದು. ಪಾದರಕ್ಷೆಗಳು, ಚರ್ಮ ಉತ್ಪನ್ನಗಳ ರಿಪೇರಿ ಹಾಗೂ ಮಾರಾಟ ಮಾಡುವವರು ಮತ್ತು ಆಟದ ಸಾಮಾನು, ಇತರೆ ಗೃಹಪಯೋಗಿ ವಸ್ತುಗಳನ್ನು ಮಾರಾಟ ಮಾಡುವವರು ಈ ಯೋಜನೆಗೊಳಪಡುತ್ತಾರೆ.

ನಗರಸಭೆಯ ಅಧ್ಯಕ್ಷೆ ಅಂಜಲಿ ಗಿರೀಶ ಕಂಬಾನೂರ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಸಲೀಮಾ ಬೇಗಂ, ಸ್ಥಾಯಿ ಸಮಿತಿ ಅಧ್ಯಕ್ಷ ತಿಪ್ಪಣ್ಣ ನಾಟೇಕಾರ, ಕೆನರಾ ಬ್ಯಾಂಕ್ ವ್ಯವಸ್ಥಾಪಕ ವೆಂಕಟೇಶ,ರೇಖಾ, ನಿವೃತ್ತ ಬ್ಯಾಂಕ್ ಅಧಿಕಾರಿ, ಎಸ್.ಟಿ.ಸೋನಾಟೆ,ಸಮುದಾಯ ಸಂಘಟಕ ಅಧಿಕಾರಿ ರಘನಾಥ ನರಸಾಳೆ, ನಗರಸಭೆಯ ಕಚೇರಿ ವ್ಯವಸ್ಥಾಪಕ ಶಂಕರ ಇಂಜನಗೇರಿ, ಕಂದಾಯ ಅಧಿಕಾರಿ ಸುನೀಲಕುಮಾರ, ಆರೋಗ್ಯ ನಿರೀಕ್ಷಕ ಶಿವರಾಜಕುಮಾರ, ಶರಣು, ರಾಜೇಶ, ಶಂಕರ ವಾಗ್ಮೋರೆ ಸೇರಿದಂತೆ ಬೀದಿ ವ್ಯಾಪಾರಿಗಳು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here