ಮಕ್ಕಳ ಹಕ್ಕುಗಳ ಉಲ್ಲಂಘನೆ ಪ್ರಕರಣ: ಜುಲೈ ೫ರಂದು ಅಹವಾಲು ಸ್ವೀಕಾರ

0
59

ಕಲಬುರಗಿ: ನವದೆಹಲಿಯ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಮಕ್ಕಳ ಹಕ್ಕುಗಳ ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಲಬುರಗಿ ವಿಭಾಗೀಯ ಮಟ್ಟದ 6 ಜಿಲ್ಲೆಗಳ ವಿವಿಧ ಇಲಾಖೆಗಳ ಪ್ರಕರಣಗಳ ಕುರಿತು 2019 ರ ಜುಲೈ 5 ರಂದು ಕಲಬುರಗಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದೆ ಎಂದು ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಅವರು ತಿಳಿಸಿದ್ದಾರೆ.

ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಅಧಿನಿಯಮ 2005 ರ ಕಲಂ 13 ಮತ್ತು 14 ಅಡಿಯಲ್ಲಿ ರಚನೆಯಾಗಿರುವ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಶಾಸನಬದ್ದ ಸಮಿತಿಯಾಗಿದ್ದು, ರಾಷ್ಟ್ರ ಮಟ್ಟದಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗದಂತೆ ತಡೆಯುವ ಮತ್ತು ದೂರುಗಳನ್ನು ಸ್ವೀಕರಿಸಿ ತನಿಖೆ ನಡೆಸುವಂತಹ ಅಧಿಕಾರವನ್ನು ಆಯೋಗ ಹೊಂದಿದೆ. ಮಕ್ಕಳ ಹಕ್ಕುಗಳ ಉಲ್ಲಂಘನೆಯ ಪ್ರಕರಣಗಳ ಕುರಿತು ದೂರುಗಳು ಏನಾದರು ಇದ್ದಲ್ಲಿ ಸಾರ್ವಜನಿಕರು ಅಂದು ಆಯೋಗದ ಮುಂದೆ ಹಾಜರಾಗಿ ದೂರು ಸಲ್ಲಿಸಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here