ಕಲಬುರಗಿ: ವಿವಾದಿತ ಮೂರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕೆಂದು ಆಗ್ರಹಿಸಿ ಗಣರಾಜ್ಯೋತ್ಸವ ದಿನದ ಅಂಗವಾಗಿ ಇಂದು ಕಲಬುರಗಿಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾದಿಂದ ಪ್ರತಿಭಟನೆ ನಡೆಯುತ್ತಿದೆ.
ನಗರದ ಗಂಜ್ ಪ್ರದೇಶದ ಮಾರ್ಗವಾಗಿ ಆರಂಭವಾದ ಜನತಾ ಪರೇಡ್ ಸದ್ಯ ಸುಪರ್ ಮಾರ್ಕೆಟ್ ಮಾರ್ಗವಾಗಿ ಜಗತ್ ವೃತಕ್ಕೆ ತಲುಪಿದೆ.
ಪರೇಡ್ ನಲ್ಲಿ ಕಲಬುರಗಿ ಉತ್ತರ ಮತಕ್ಷೇತ್ರದ ಶಾಸಕಿ ಕನಿಜ್ ಫಾತೀಮಾ, ಸಾಹಿತಿ ಹಾಗೂ ಮಹಿಳಾ ಹೋರಾಟಗಾರ್ತಿ ಕೆ ನೀಲಾ, ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಶರಣಬಸಪ್ಪ ಮಮಶೇಟಿ, ಮಾಜಿ ವಿಧಾನ ಪರಿಷತ್ ಸದಸ್ಯ ಅಲ್ಲಮಪ್ರಭು ಪಾಟೀಲ್, ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಜಗದೇವ್ ಗುತ್ತೇದಾರ್, ಮಜಹರ್ ಆ ಖಾನ್ ಸೇರಿದಂತೆ ಮುಂತಾದವರು ಇದ್ದರು.
ಪರೇಡ್ ನಲ್ಲಿ 200 ಕ್ಕೂ ಹೆಚ್ಚು ಟ್ರಾಕ್ಟರ್ ಭಾಗವಹಿಸಿದ್ದು, ಹೋರಾಟದ ನೇತೃತ್ವ ವಹಿಸಿದ ಮುಖಂಡರೆಲ್ಲರು ಪಾದ ಯಾತ್ರೆ ನಡೆಸುವ ಮೂಲಕ ರೈತ ವಿರೋಧಿ ಕಾನೂನುಗಳನ್ನು ವಾಪಸ್ ಪಡೆಯಬೇಕೆಂದು ಆಗ್ರಹಿಸಿದರು.