32ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

0
21

ಕಲಬುರಗಿ: ಸಾರಿಗೆ ಇಲಾಖೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಹಾಗೂ ಪೊಲೀಸ್ ಇಲಾಖೆ ಇವುಗಳ ಸಹಯೋಗದೊಂದಿಗೆ ಇತ್ತೀಚೆಗೆ 32ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆಯನ್ನು ಕಲಬುರಗಿಯ ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯಲ್ಲಿ ಇತ್ತೀಚೆಗೆ ಆಚರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಹಿರಿಯ ಮೋಟಾರು ವಾಹನ ನಿರೀಕ್ಷಕರಾದ ಸಿ.ಈರಣ್ಣ ಅವರು ರಸ್ತೆ ಸುರಕ್ಷತೆ ಕುರಿತು ಉಪನ್ಯಾಸ ನೀಡಿ, ಜನವರಿ 18 ರಿಂದ ಫೆಬ್ರವರಿ 17ರವರೆಗೆ 32ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆಯನ್ನು ಆಚರಿಸಲಾಗುತ್ತಿದೆ. ಸಾರ್ವಜನಿಕರು ವಾಹನ ಚಾಲನೆ ಮಾಡುವಾಗ ಸೀಟ್ ಬೆಲ್ಟ್ ಧರಿಸಬೇಕು. ಅನಾವಶ್ಯಕವಾಗಿ ಓವರ್ ಟೇಕಿಂಗ್ ಮಾಡಬಾರದು.

Contact Your\'s Advertisement; 9902492681

ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಬಾರದು. ವಾಹನ ಚಾಲನೆ ಮಾಡುವಾಗ ಮೊಬೈಲ್ ಬಳಸಬಾರದು. ಅಪ್ರಾಪ್ತ ವಯಸ್ಕರು ವಾಹನ ಚಲಾಯಿಸುವುದು ಅಪರಾಧವಾಗಿದೆ. ಸಾರ್ವಜನಿಕರು ರಸ್ತೆ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಅರಿವು ಮೂಡಿಸಿದರು.

ಕಾರ್ಯಕ್ರಮದಲ್ಲಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೂರ್ಮರಾವ ಎಂ. ಸೇರಿದಂತೆ ಪೊಲೀಸ್ ಇಲಾಖೆಯ ವೃತ್ತ ನಿರೀಕ್ಷಕರು ಮತ್ತಿತರ ಅಧಿಕಾರಿ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here