ಬಾಪು ತನ್ನ ಪ್ರಾಣಕ್ಕಿಂತಲೂ ಹೆಚ್ಚು ಪ್ರೀತಿಸಿದ ಕೋಮುಸೌಹಾರ್ದತೆಗೆ ಕಟಿಬದ್ಧರಾಗಿರೋಣ

0
54

ರಾಷ್ಟ್ರೀಯ ಸರ್ವೋದಯ ದಿನದಂದು, ರಾಷ್ಟ್ರಪಿತ ಮಹಾತ್ಮ ಗಾಂಧಿಯವರಿಗೆ ಗೌರವ ಅರ್ಪಿಸುವ. ಮಹಾತ್ಮ ಗಾಂಧೀಜಿ ಬದುಕಿದ ಸತ್ಯ, ಅಹಿಂಸೆ ಮತ್ತು ಶಾಂತಿಯ ಜೀವನ ಮೌಲ್ಯಗಳನ್ನು ನಮ್ಮದಾಗಿಸಿಕೊಂಡು ಮುನ್ನಡೆಯೋಣ. ಬಾಪು ತನ್ನ ಪ್ರಾಣಕ್ಕಿಂತಲೂ ಹೆಚ್ಚು ಪ್ರೀತಿಸಿದ ಕೋಮುಸೌಹಾರ್ದತೆಗೆ ಕಟಿಬದ್ಧರಾಗಿರೋಣ.

ಗಾಂಧೀಜಿಯವರ ಕಲ್ಪನೆಯ ಸರ್ವೋದಯ ಸಮಾಜ ರಚನೆಗೆ ಸಮಾನತೆ, ಸಹಕಾರ, ಪ್ರೇಮ, ಅಹಿಂಸೆ, ನ್ಯಾಯ ಈ ಅಂಶಗಳು ಆಧಾರವಾಗಬೇಕಿತ್ತು. ಅದಕ್ಕೆ ಜನತೆಯಲ್ಲಿ ಜ್ಞಾನ, ಉದ್ಯೋಗ, ಪ್ರಸಾರ, ದಾರಿದ್ರ್ಯ ನಿವಾರಣೆ ಇವು ಅಗತ್ಯವಾಗಿ ಆಗಬೇಕಾಗಿತ್ತು. ಅದಕ್ಕೆ ಶಿಕ್ಷಣ ಸೂಕ್ತ ರೀತಿಯಲ್ಲಿ ಮಾರ್ಪಡಬೇಕಾಗಿತ್ತು. ಏಕೆಂದರೆ ಸಮಾಜ ಪರಿವರ್ತನೆಗೆ ಅದು ಉಪಕರಣವೆಂಬುದನ್ನು ಅವರು ಗ್ರಹಿಸಿದ್ದರು. ಅದೇ ಸಮಯದಲ್ಲಿ ಬಾರಿಸ್ಟರ್ ಬಿ.ಆರ್.ಅಂಬೇಡ್ಕರ ರು ಮತ್ತು ಸಂವಿಧಾನ ರಚನಾಕಾರ ಶಿಕ್ಷಣ ನೀಡುವ ಪ್ರತಿಪಾದಿಸುವ ಅಂಥ ಶಿಕ್ಷಣ ಪದ್ಧತಿಯಲ್ಲಿ ಪ್ರಾಥಮಿಕ ಶಿಕ್ಷಣವನ್ನು ಏಳು ವರ್ಷಗಳ ಕಾಲಾವಧಿಗಾದರೂ ಹೆಚ್ಚಿಸಿ, ಅದರಿಂದ ಮೆಟ್ರಿಕ್ಯುಲೇಷನ್ ಹಂತದಲ್ಲಿ ದೊರೆಯುವಷ್ಟು ಸಾಮಾನ್ಯ ಜ್ಞಾನವೂ (ಇಂಗ್ಲಿಷನ್ನುಳಿದು) ವೃತ್ತಿಯೊಂದರಲ್ಲಿ ಶಿಕ್ಷಣವೂ ದೊರಕುವಂತೆ ಅವಕಾಶ ಕಲ್ಪನೆಯಾಗಬೇಕೆಂದು ತೀರ್ಮಾನಿಸಿಕೊಂಡರು. ಈ ಬದಲಾವಣೆಗಳನ್ನು ಅಂದಿದ್ದ ಶಿಕ್ಷಣ ಪದ್ಧತಿಗೆ ತೇಪೆಹಾಕಿ ನೇರಮಾಡುವುದು ಅಸಾಧ್ಯವೆಂದುಕೊಂಡು ಪ್ರತ್ಯೇಕ ಶಿಕ್ಷಣಪದ್ಧತಿಯೊಂದರ ಅನುಷ್ಠಾನಕ್ಕೆ ಯತ್ನಿಸಿದರು.

Contact Your\'s Advertisement; 9902492681

ರಾಷ್ಟ್ರದ ಅಂದಿನ ತೀವ್ರ ಸಮಸ್ಯೆಗಳನ್ನೂ ನಿವಾರಿಸಿ ತಮ್ಮ ಕನಸಿನ ಸರ್ವೋದಯ ಸಮಾಜವನ್ನು ರಚಿಸಬಲ್ಲ ಆ ಪದ್ಧತಿಯಲ್ಲಿ ಗ್ರಾಮೋದ್ಯೋಗಗಳಿಗೆ ಪ್ರಾಧಾನ್ಯವಿರಬೇಕೆಂದು ಭಾವಿಸಿದರು. ಏಕೆಂದರೆ, ಇಲ್ಲಿನ ಶೇ.80 ರಷ್ಟು ಜನತೆ ಗ್ರಾಮವಾಸಿಗಳಾಗಿದ್ದರು.

ರಾಷ್ಟ್ರದ ಪ್ರಧಾನ ಸಮಸ್ಯೆಗಳನ್ನೂ ಪರಿಹರಿಸಿ ಸಮಾಜದಲ್ಲಿ ಪರಿವರ್ತನೆ ಮಾಡಬಲ್ಲ ಆ ಶಿಕ್ಷಣವನ್ನು ಅವರು ‘ಗ್ರಾಮೀಣ ರಾಷ್ಟ್ರೀಯ ಶಿಕ್ಷಣ’ ಎಂದು ಕರೆದರು. ಸಮಕಾಲೀನ ಶಿಕ್ಷಣವೇತ್ತರು ರಾಷ್ಟ್ರೀಯ ಶಿಕ್ಷಣ ಎಂಬುದಕ್ಕೆ ಬೇರೆ ಬೇರೆ ಅರ್ಥ ವ್ಯಾಪ್ತಿಯನ್ನು ಕಲ್ಪಿಸಿದ್ದರು.

ಜೀವನಕ್ಕೆ ಹೊಂದಿಸಿಕೊಂಡು ವಿಷಯಗಳನ್ನು ಸಮೀಕರಿಸಿಕೊಂಡು ಪಾಠ ಬೋಧಿಸುವ ನೂತನ ಬೋಧನಕ್ರಮ ಬಳಕೆಗೆ ಬರುತ್ತಿದೆ. ತಮ್ಮ ಶಾಲೆಯನ್ನು ತಾವೇ, ನಮ್ಮ ಈಗಿನ ಪ್ರಧಾನಿ 2014 ರಲ್ಲಿ ಜಾರಿಗೆ ತಂದ ಸ್ವಚ್ಚ ಭಾರತ, ಗಾಂಧಿ ಜಿ ಸೂಚಿಸಿದ ಕಲ್ಪನೆಗೆ ನೀರು ಹಾಕಿ, ಚೊಕ್ಕಟವಾಗಿಟ್ಟುಕೊಳ್ಳುವ ಸ್ವಾವಲಂಬನೆಯ ದೃಷ್ಟಿ ಆಚರಣೆಗೆ ಬರುತ್ತಿದೆ. ಕೈಕೆಲಸಗಳ ಮೂಲಕ ಮಕ್ಕಳ ಕ್ರಿಯಾತ್ಮಕ ಶಕ್ತಿಗೆ ಪೋಷಣೆ ದೊರೆಯುವುದರ ಜೊತೆಗೆ ಅವರ ಮನಸ್ಸಿನಲ್ಲಿ ಶ್ರಮಜೀವನದ ಬಗ್ಗೆ ಗೌರವ ಬೆಳೆಯಲು ಅವಕಾಶವಾಗಿದೆ.

ಶಾಲೆಯೊಡನೆ ಸುತ್ತಣ ಸಮಾಜದ ಜೀವನವನ್ನು ಹೊಂದಿಸಿಕೊಂಡು ಕೆಲಸಮಾಡುತ್ತ ಶಾಲೆ, ಸಮಾಜದ ಕ್ಷೇಮಚಿಂತನೆಗೂ ಅಭಿವೃದ್ಧಿಸಾಧನೆಗೂ ಕೆಲಸ ಮಾಡಬೇಕಾದ ಸಂಸ್ಥೆಯಾಗಿ ರೂಪುಗೊಳ್ಳುತ್ತಿದೆ. ಇಷ್ಟೆಲ್ಲ ಮೂಲ ಶಿಕ್ಷಣ ಪ್ರಾಥಮಿಕ ಶಿಕ್ಷಣದ ಮೇಲೆ ಇತ್ತೀಚಿನ ದಿನಗಳಲ್ಲಿ ಬೀರಿರುವ ಪ್ರಭಾವವೆನ್ನಬಹುದು. ಆದರೂ ಅದು ತನ್ನ ಶುದ್ಧರೂಪದಲ್ಲಿ ದೇಶಾದ್ಯಂತ ಆಚರಣೆಗೆ ಬರಲೇಬೇಕೆಂದು ವಾದಿಸತಕ್ಕವರು ಇಂದಿಗೂ ಉಳಿದುಕೊಂಡೇ ಇರುವರು.

-ಜೇನವೆರಿ. ಎಸ್. ವಿನೋದ ಕುಮಾರ, ನ್ಯಾಯವಾದಿ ಕಲಬುರಗಿ

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here