ಕಲಬುರಗಿ: ಸಮಾಜ ಕಲ್ಯಾಣ ಇಲಾಖೆಯಿಂದ 2020-21ನೇ ಸಾಲಿನಲ್ಲಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ ಕಲಬುರಗಿ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಹೊಸದಾಗಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ ಎಂದು ಕಲಬುರಗಿ ಸಮಾಜ ಕಲ್ಯಾಣ ಇಲಾಖೆಯ (ಗ್ರೇಡ್-1) ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ವಿದ್ಯಾರ್ಥಿಗಳು www.ssp.karnataka.gov.in ವೆಬ್‍ಸೈಟ್‍ದಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ವಿದ್ಯಾರ್ಥಿಗಳು ಎಸ್.ಎ.ಟಿ.ಎಸ್. (SಂಖಿS) ನೋಂದಣಿ ಸಂಖ್ಯೆ, ವಿದ್ಯಾರ್ಥಿಯ ಭಾವಚಿತ್ರ, ಜಾತಿ ಮತ್ತು ಆದಾಯ ಪ್ರಮಾಣಪತ್ರ, ಹಿಂದಿನ ತರಗತಿಯ ಅಂಕಪಟ್ಟಿ, ವಿದ್ಯಾರ್ಥಿ ಮತ್ತು ಪೋಷಕರ ಆಧಾರ ಕಾರ್ಡ್, ಬ್ಯಾಂಕ್ ಪಾಸ್‍ಬುಕ್ ಜಿರಾಕ್ಸ್ ಪ್ರತಿ (ವಿದ್ಯಾರ್ಥಿಯ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಎನ್.ಪಿ.ಸಿ.ಐ.(ಓPಅI) ಲಿಂಕ್ ಮಾಡುವುದು ಕಡ್ಡಾಯ ಇರುತ್ತದೆ). ಪÀಡೀತರ ಚೀಟಿ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬೇಕು.
ವಿದ್ಯಾರ್ಥಿಗಳು ಸಲ್ಲಿಸಿದ ಅರ್ಜಿಯ ಜೊತೆಗೆ ಎಲ್ಲಾ ದಾಖಲಾತಿಗಳ ದೃಢೀಕರಣ ಪ್ರತಿಯನ್ನು ತಮ್ಮ ಶಾಲೆಯ ಮುಖ್ಯ ಗುರುಗಳಿಗೆ ಸಲ್ಲಿಸಿ ಅದರ ಒಂದು ಪ್ರತಿಯನ್ನು ತಮ್ಮ ಬಳಿ ಇಟ್ಟುಕೊಳ್ಳಬೇಕು. ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.