ಕಲಬುರಗಿ: ಕರ್ನಾಟಕ ರಕ್ಷಣಾ ವೇದಿಕೆ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಆಶ್ರಯದಲ್ಲಿ ಕರವೇ ರಾಜ್ಯಾದ್ಯಕ್ಷ ಎಚ್. ಶಿವರಾಮೇಗೌಡ ಜನ್ಮ ದಿನದ ಪ್ರಯುಕ್ತ ಆರೋಗ್ಯ ತಪಾಸಣಾ ಶಿಬಿರ ಹಾಗೂ ದ.ರಾ. ಬೇಂದ್ರೆ ಪ್ರಶಸ್ತಿ ಪ್ರದಾನ ಸಮಾರಂಭ ಫೆ. 1ರಂದು ಶಹಬಾಜಾರ್ ನ ಸುವರ್ಣ ನಗರದಲ್ಲಿರುವ ಶಾರದಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೆಳಗ್ಗೆ 10 ಗಂಟೆಗೆ ಆಯೋಜಿಸಲಾಗಿದೆ ಎಂದು ಕರವೇ ರಾಜ್ಯ ಸಂಚಾಲಕ ಮಂಜುನಾಥ ನಾಲವಾರಕರ್ ತಿಳಿಸಿದ್ದಾರೆ.
ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ಅಧ್ಯಕ್ಷ ಚಂದು ಪಾಟೀಲ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಪತ್ರಕರ್ತ-ಲೇಖಕ ಡಾ. ಶಿವರಂಜನ್ ಸತ್ಯಂಪೇಟೆ ಆಗಮಿಸಲಿದ್ದಾರೆ.
ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕಲಬುರಗಿ ಸಭಾಪತಿ ಅಪ್ಪಾರಾವ ಅಕ್ಕೋಣಿ, ಕಾರ್ಯದರ್ಶಿ ರವೀಂದ್ರ ಶಾಬಾದಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸುರೇಶ ಬಡಿಗೇರ ಅತಿಥಿಗಳಾಗಿ ಆಗಮಿಸಲಿದ್ದಾರೆ. ಶಾರಾದಾ ಶಾಲೆಯ ಮುಖ್ಯೋಪಾಧ್ಯಾಯ ಸಂಜಯ ಸಮಾಣೆ ಅಧ್ಯಕ್ಷತೆ ವಹಿಸಲಿದ್ದಾರೆ. ಮಂಜುನಾಥ ನಾಲವಾರಕರ್ ನೇತೃತ್ವ ವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಬೇಂದ್ರೆ ಪ್ರಶಸ್ತಿ ಪ್ರದಾನ: ಇದೇವೇಳೆಯಲ್ಲಿ ಬೇಂದ್ರೆ ಅವರ ಜನ್ಮ ದಿನದ ಪ್ರಯುಕ್ತ ಡಾ. ಎಸ್. ಎಸ್. ಗುಬ್ಬಿ, ವೆಂಕಟೇಶ ಜನಾದ್ರಿ, ಸಿದ್ಧರಾಮ ತಾಜಮಾನೆ, ಡಾ. ರಾಜಶೇಖರ ಮಾಂಗ್, ಡಾ. ಶರಣಬಸಪ್ಪ ವಡ್ಡನಕೇರಿ ಅವರಿಗೆ ಬೇಂದ್ರೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.