ಅಫಜಲಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಉಚಿತ ದಂತ ತಪಾಸಣೆ, ಚಿಕಿತ್ಸಾ ಶಿಬಿರ

0
113

ಕಲಬುರಗಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಅಫಜಲಪುರ ತಾಲೂಕಾ ಸಾರ್ವಜನಿಕ ಆಸ್ಪತ್ರೆ ಇವುಗಳ ಸಂಯುಕ್ತಾಶ್ರಯದಲ್ಲಿ ರಾಷ್ಟೀಯ ಓರಲ್ ಹೆಲ್ತ್ ಪಾಲಿಸಿ ಹಾಗೂ ದಂತ ಆರೋಗ್ಯ ಕಾರ್ಯಕ್ರಮದಡಿ ಅಫಜಲಪೂರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಉಚಿತ ದಂತ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರವನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಕಲಬುರಗಿ ಎನ್.ಓ.ಹೆಚ್.ಪಿ. ನೋಡಲ್ ಅಧಿಕಾರಿ ಡಾ. ಸಂಧ್ಯಾ ಡಾಂಗೆ ಅವರು ದಂತ ಆರೋಗ್ಯ ಮತ್ತು ಚಿಕಿತ್ಸಾ ವಿಷಯದ ಕುರಿತು ಮಾತನಾಡಿದಲ್ಲದೇ ಸಾರ್ವಜನಿಕರು ರಾಜ್ಯ ಸರ್ಕಾರದ ದಂತ ಭಾಗ್ಯ ಯೋಜನೆಯ ಸದುಪಯೋಗ ಪಡೆಯಬೇಕೆಂದರು.

Contact Your\'s Advertisement; 9902492681

ಕಾರ್ಯಕ್ರಮದಲ್ಲಿ ಕಲಬುರಗಿ ತಂಬಾಕು ನಿಷೇಧ ಕೋಶದ ಜಿಲ್ಲಾ ಸಲಹೆಗಾರ ಸುಜಾತ ಪಾಟೀಲ ಅವರು ಜಿಲ್ಲಾ ತಂಬಾಕು ನಿಷೇಧ ಕೋಶದ ಟಿಸಿಸಿ ತಂಬಾಕು ವ್ಯಸನ ಮುಕ್ತ ಕೇಂದ್ರದ ಸೌಲಭ್ಯಗಳು ಹಾಗೂ ತಂಬಾಕು ಬಳಕೆಯ ದುಷ್ಪರಿಣಾಮಗಳ ಕುರಿತು ಮಾತನಾಡಿದರು. ತಾಲೂಕಾ ಆರೋಗ್ಯ ಅಧಿಕಾರಿಗಳಾದ ಡಾ. ರತ್ನಕರ ತೋರಣ ಅವರು ಕಾರ್ಯಕ್ರಮ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಅಫಜಲಪೂರ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಮಾಹಾಂತಪ್ಪ, ದಂತ ಆರೋಗ್ಯ ಅಧಿಕಾರಿ ಡಾ. ಸ್ವರೂಪ, ಡಾ.ಮಹೇಶ, ಡಾ. ಸಂಜಯ, ಡಾ. ಪ್ರಿತಮ್, ಡಾ. ವೈಶಾಲಿ, ಡಾ. ಶೃತಿ ಎಂ., ಆರತಿ ಧನಶ್ರೀ, ಸುಹಾಸನಿ ಆರ್, ರವಿ.ಎಂ.ಪೂಜಾರಿ, ಖಬುಲಸಾಬ ಬಡೆಗಾರ, ವಿನಾಯಕ ಜೋಷಿ ಮತ್ತಿತರರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here