ಮಲ್ಲಿಕಾರ್ಜುನ್ ಖರ್ಗೆಗೆ ಬೆದರಿಕೆ: ಶಾಸಕ ಪ್ರಿಯಾಂಕ್ ಖರ್ಗೆ ಟ್ವೀಟ್ ನಲ್ಲಿ ಉತ್ತರ

0
92

ಕಲಬುರಗಿ: ಕಾಂಗ್ರೆಸ್ ಹಿರಿಯ ನಾಯಕ ಕೇಂದ್ರದ ಮಾಜಿ ಸಚಿವ ಹಾಗೂ ರಾಜ್ಯ ಸಭಾ ಸದಸ್ಯರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬೆದರಿಕೆ ಕರೆ ಬಂದ ಹಿನ್ನೆಲೆ ಶಾಸಕರಾದ ಹಾಗೂ ಕೆಪಿಸಿಸಿ ವಕ್ತಾರರಾದ ಪ್ರಿಯಾಂಕ್ ಖರ್ಗೆ ಅವರು ವಿಛಿದ್ರಕಾರಕ ಶಕ್ತಿಗಳಿಗೆ ಟ್ವಿಟ್ ಮೂಲಕ ದಿಟ್ಟತನದ ಉತ್ತರ ನೀಡಿದ್ದಾರೆ.

” ನಾವು ಸತ್ಯ ಹೇಳುವುದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ. ನಾವು ಬುದ್ದ ಬಸವ ಹಾಗೂ ಅಂಬೇಡ್ಕರರ ತತ್ವ ಸಿದ್ದಾಂತವನ್ನು ಬಲವಾಗಿ ನಂಬಿದ್ದೇವೆ. ನಾವು ಯಾವಾಗಲೂ ಸಂವಿಧಾನದ ಪರವಾಗಿದ್ದೇವೆ. ಯಾರಿಂದಲೂ ನಮ್ಮನ್ನು ಹೆದರಿಸಲು ಸಾಧ್ಯವಿಲ್ಲ. ಬೆದರಿಕೆ ಕರೆಗಳು ನಮ್ಮ ವಿಚಾರಗಳ ಮೌಲ್ಯವನ್ನು ಇನ್ನಷ್ಟು ಗಟ್ಟಿಗೊಳಿಸುತ್ತವೆ” ಎಂದು ಪ್ರಿಯಾಂಕ್ ಖರ್ಗೆ ಟ್ವಿಟ್ ಮಾಡಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here