ಜೂನ್ 23ರಂದು ಕಲಬುರಗಿ ವಿಭಾಗದ ಕನ್ನಡ ಮಾಧ್ಯಮ ಪ್ರಶಸ್ತಿ ಪ್ರದಾನ ಸಮಾರಂಭ

0
64

ಕಲಬುರಗಿ: ಕನ್ನಡ ಪುಸ್ತಕ ಪ್ರಾಧಿಕಾರದಿಂದ 2018-19 ನೇ ಸಾಲಿನ ಕಲಬುರಗಿ ವಿಭಾಗದ ಕನ್ನಡ ಮಾಧ್ಯಮ ಪುಸ್ತಕ ಪ್ರದಾನ ಸಮಾರಂಭವನ್ನು ಜೂನ್ 23 ರಂದು ರವಿವಾರ ಬೆಳಿಗ್ಗೆ 10.30 ಗಂಟೆಗೆ ಕಲಬುರಗಿಯ ಡಾ. ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಏರ್ಪಡಿಸಲಾಗಿದೆ.

ಸಮಾಜ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಈ ಸಮಾರಂಭವನ್ನು ಉದ್ಘಾಟಿಸುವರು. ಜೇವರ್ಗಿ ಶಾಸಕ ಹಾಗೂ ನವದೆಹಲಿ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಡಾ. ಅಜಯಸಿಂಗ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ. ಎಸ್.ಜಿ. ಸಿದ್ಧರಾಮಯ್ಯ ಅವರು ಪ್ರಾಸ್ತಾವಿಕ ನುಡಿ ಹೇಳುವರು. ಕಲಬುರಗಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ದತ್ತಾತ್ರೇಯ ಸಿ. ಪಾಟೀಲ್ ರೇವೂರ್ ಅಧಕ್ಷತೆ ವಹಿಸುವರು. ನಿವೃತ್ತ ಪ್ರಾಧ್ಯಾಪಕ ಡಾ. ವೀರಣ್ಣ ದಂಡೆ ಮತ್ತು ಸಂಸ್ಕೃತಿ ಚಿಂತಕಿ ಡಾ. ಜಯಶ್ರೀ ದಂಡೆ ಹಿತನುಡಿಗಳನ್ನಾಡುವರು.  ಕಲಬುರಗಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ, ಕಲಬುರಗಿ ಲೋಕಸಭಾ ಸದಸ್ಯ ಡಾ. ಉಮೇಶ ಜಾಧವ ಹಾಗೂ ಬೀದರ ಲೋಕಸಭಾ ಸದಸ್ಯ ಭಗವಂತ ಖೂಬಾ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

Contact Your\'s Advertisement; 9902492681

ವಿಧಾನಸಭಾ ಶಾಸಕರುಗಳಾದ ಎಂ.ವೈ. ಪಾಟೀಲ, ಸುಭಾಷ ಗುತ್ತೇದಾರ್, ರಾಜಕುಮಾರ ಪಾಟೀಲ ತೇಲ್ಕೂರ,  ಬಸವರಾಜ ಬಿ. ಮುತ್ತಿಮೂಡ,  ಕನೀಜ್ ಫಾತೀಮಾ,  ಡಅವಿನಾಶ ಯು. ಜಾಧವ,  ವಿಧಾನ ಪರಿಷತ್ ಶಾಸಕರುಗಳಾದ ಇಕ್ಬಾಲ್ ಅಹ್ಮದ್ ಸರಡಗಿ, ಶರಣಪ್ಪ ಮಟ್ಟೂರ್, ಬಿ.ಜಿ. ಪಾಟೀಲ, ಡಾ. ಚಂದ್ರಶೇಖರ ಪಾಟೀಲ, ಕಲಬುರಗಿ ಮಹಾನಗರ ಪಾಲಿಕೆ ಮಹಾಪೌರರಾದ ಮಲ್ಲಮ್ಮ ಸಿದ್ರಾಮಪ್ಪ ವಳಕೇರಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪಿ. ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವೀರಭದ್ರಪ್ಪ ಸಿಂಪಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಾಂತಗೌಡ ಬಿ.ಆರ್., ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಿವಶರಣಪ್ಪ ಮುಳೆಗಾಂವ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಮಹಾಂತೇಶ್ ಲಕ್ಷಣ ಹಟ್ಟಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ್ ಮರಬನಳ್ಳಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here