ಬಳ್ಳಾರಿ: ಕ್ಯಾಂಪಸ್ ಫ್ರಂಟ್ ಕರ್ನಾಟಕ ರಾಜ್ಯ ಪ್ರತಿನಿಧಿ ಸಭೆಯಲ್ಲಿ ಪ್ರಸ್ತುತ ರಾಜ್ಯದ ವಿದ್ಯಾರ್ಥಿಗಳ ಶೈಕ್ಷಣಿಕ, ಸಾಮಾಜಿಕ ಸಮಸ್ಯೆಗಳ ಬಗ್ಗೆ ಚರ್ಚಿಸಿ ಬಳಿಕ ಮುಂದಿನ 2021-2022 ಸಾಲಿನ ನೂತನ ಸಮಿತಿಯನ್ನು ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ಗಂಗಾವತಿಯ ಇಬ್ಬರು ವಿದ್ಯಾರ್ಥಿಗಳು ರಾಜ್ಯ ಸಮಿತಿಗೆ ಆಯ್ಕೆಯಾಗಿದ್ದರೆ. ಗಂಗಾವತಿಯಲ್ಲಿ ಬಿ.ಎಸ್.ಸಿ ಕಲಿಯುತ್ತಿರುವ ಸೈಯದ್ ಸರ್ಫಾರಾಜ್ ಕ್ಯಾಂಪಸ್ ಫ್ರಂಟ್ ಕರ್ನಾಟಕ ರಾಜ್ಯ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದು, ಮೈಸೂರಿನ ವಿ.ವಿ.ಯಲ್ಲಿ ಎಮ್.ಎ ಕಲಿಯುತ್ತಿರುವ ಗಂಗಾವತಿಯ ಹುಸೇನ್ ಭಾಷಾ ರಾಜ್ಯ ಸಮಿತಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ ಎಂದು ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.