ಡಾ.ಮಲ್ಲಿಕಾರ್ಜುನ ಖರ್ಗೆ ನೇಮಕಕ್ಕೆ ರಾಜೇಶ ಯನಗುಂಟಿಕರ್ ಹರ್ಷ

0
63

ಶಹಾಬಾದ: ರಾಜ್ಯಸಭೆ ವಿರೋಧ ಪಕ್ಷ ನಾಯಕ ಸ್ಥಾನಕ್ಕೆ ಡಾ.ಮಲ್ಲಿಕಾರ್ಜುನ ಖರ್ಗೆ ಅವರನ್ನು ನೇಮಕ ಮಾಡಿದಕ್ಕೆ ಕಾಂಗ್ರೆಸ್ ಮುಖಂಡ ರಾಜೇಶ ಯನಗುಂಟಿಕರ್ ಹರ್ಷ ವ್ಯಕ್ತಪಡಿಸಿದ್ದಾರೆ.

ಡಾ.ಮಲ್ಲಿಕಾರ್ಜುನ ಖರ್ಗೆ ಅವರು ರಾಜಕೀಯವಾಗಿ ಎಲ್ಲಾ ಅನುಭವಗಳನ್ನು ಹೊಂದಿದ ನಾಯಕರು. ರಾಜ್ಯಸಭೆ ವಿರೋಧ ಪಕ್ಷ ನಾಯಕ ಸ್ಥಾನಕ್ಕೆ ಆಯ್ಕೆ ಮಾಡಿರುವುದು ಪಕ್ಷದ ಕಾರ್ಯಕರ್ತರಿಗೆ ಖುಷಿ ತಂದಿದೆ.ರಾಜ್ಯ ಸಭೆಯಲ್ಲಿ ಖರ್ಗೆಜಿವರು ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಧ್ವನಿ ಎತ್ತಲಿದ್ದಾರೆ.ಈ ಹಿಂದೆಯೂ ಸಾರ್ವಜನಿಕರ ಪರವಾಗಿ ಧ್ವನಿ ಎತ್ತಿದ ಉದಾಹರಣೆಗಳಿವೆ.ಈ ಒಂದು ಉತ್ತಮ ನಿರ್ಣಯ ತೆಗೆದುಕೊಂಡು ಖರ್ಗೆ ಅವರಿಗೆ ಅವಕಾಶ ನೀಡಿದ ಸೋನಿಯಾ ಗಾಂಧಿ ಹಾಗೂ ರಾಹುಲ ಗಾಂಧಿ ಅವರಿಗೆ ಅಭಿನಂಧನೆಗಳು ಎಂದು ತಿಳಿಸಿದ್ದಾರೆ.

Contact Your\'s Advertisement; 9902492681

ಇದನ್ನೂ ಸಹ ಓದಿ: ಶಹಾಬಾದ್: ವಿರೋಧ ಪಕ್ಷದ ನಾಯಕರಾಗಿ ಖರ್ಗೆ ಆಯ್ಕೆ: ಬ್ಲಾಕ್ ಕಾಂಗ್ರೆಸ್ ವತಿಯಿಂದ ಸಂಭ್ರಮ

ಆಕ್ರೋಶ: ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬೇದರಿಕೆ ಕರೆ ಮಾಡಿದ ಆರೋಪಿಗಳನ್ನು ಬಂಧಿಸುವಲ್ಲಿ ಸರ್ಕಾರ ಮುಂದಾಗದಿರುವುದಕ್ಕೆ ರಾಜೇಶ ಯನಗುಂಟಿಕರ್ ಆಕ್ರೋಶ ಹೊರಹಾಕಿದರು.

ಖರ್ಗೆಜಿ ಅವರು ರಾಜಕೀಯ ಬದುಕಿನ ಹೋರಾಟದ ಉದ್ದಗಲಕ್ಕೂ ಬದ್ಧತೆಯಿಂದ ಹಾಗೂ ಸಂವಿಧಾನದ ಚೌಕಟ್ಟಿನಲ್ಲಿಯೇ ಆಡಳಿತ ಮಾಡಿದ್ದಾರೆ.ದರೆ ಇತ್ತಿಚ್ಚಿನ ದಿನಗಳಲ್ಲಿ ಕರೆ ಮಾಡಿ ಅವರನ್ನು ಬೆದರಿಕೆ ಹಾಕುತ್ತಿದ್ದಾರೆ.ಈ ಬಗ್ಗೆ ದೂರು ನೀಡಿದರೂ, ಸರ್ಕಾರ ಯಾವುದೇ ಕ್ರಮಕ್ಕೆ ಮುಂದಾಗಿರುವುದು ನಾಚಿಕೆಗೇಡಿನ ಸಂಗತಿ.

ಬೇದರಿಕೆ ಕರೆ ಮಾಡಿದವರನ್ನು ಸರ್ಕಾರ ರಕ್ಷಣೆ ನೀಡುತ್ತಿದೆ ಎಂದು ಅವರು ಗಂಭೀರವಾಗಿ ಆರೋಪಿಸಿ, ಕೂಡಲೇ ಆರೋಪಿಗಳನ್ನು ಬಂಧಿಸಬೇಕು.ಇಲ್ಲದಿದ್ದರೇ ಹೋರಾಟ ಅನಿವಾರ್ಯವಾಗುತ್ತದೆ ಎಂದು ಎಚ್ಚರಿಸಿದರು.

ಇದನ್ನೂ ಸಹ ಓದಿ: ಶಹಾಬಾದ್: ವಿವಾದಿತ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here