ಅತಿವೃಷ್ಠಿ ಹಾನಿ: ವಾರದಲ್ಲಿ ರೈತರ ಖಾತೆಗೆ 29.58 ಕೋಟಿ ಜಮಾ: ಬಿ. ಸಿ.ಪಾಟೀಲ

2
41

ಕಲಬುರಗಿ: ಅತಿವೃಷ್ಠಿಯಿಂದ ಬೆಳೆ ಹಾನಿಗೊಳಗಾಗಿ ಕಂಗಾಲಾಗಿರುವ ಕಲಬುರಗಿ ಜಿಲ್ಲೆಯ 41 ಸಾವಿರ ರೈತರಿಗೆ ಬರುವ ಒಂದು ವಾರದಲ್ಲಿ 29.58 ಕೋಟಿ ರೂ. ಹಣ ನೇರವಾಗಿ ಅವರ ಖಾತೆಗೆ ಜಮಾ ಮಾಡಲಾಗುತ್ತದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದರು.

ರವಿವಾರ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೃಷಿ ಇಲಾಖೆಗೆ ಸಂಬಂಧಿಸಿದಂತೆ ಕೃಷಿ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.

Contact Your\'s Advertisement; 9902492681

ಪ್ರಧಾಮಂತ್ರಿ ಕೃಷಿ ಸಮ್ಮಾನ್ ಯೋಜನೆ ಅನುಷ್ಠಾನದಲ್ಲಿ ಕರ್ನಾಟಕ ನಂ-1: ಬಿ.ಸಿ.ಪಾಟೀಲ

ಜಿಲ್ಲೆಯಲ್ಲಿ ಪ್ರಮುಖವಾಗಿ ತೊಗರಿ, ಹೆಸರು, ಉದ್ದು, ಸೋಯಾಬಿನ್ ಸೇರಿದಂತೆ ಅತಿವೃಷ್ಠಿಯಿಂದ ವಿವಿಧ ಬೆಳೆಗಳ ಒಟ್ಟಾರೆ 442626 ಹೆಕ್ಟೇರ್ ಪ್ರದೇಶ ಹಾನಿಗೊಳಗಾಗಿದೆ. ಇದರಲ್ಲಿ ಈಗಾಗಲೆ ಪರಿಹಾರಕ್ಕೆ ನೋಂದಣಿಯಾದ 150409 ರೈತರ ಪೈಕಿ 139158 ರೈತರಿಗೆ 6 ಹಂತಗಳಲ್ಲಿ 97.07 ಕೋಟಿ ರೂ. ಪರಿಹಾರ ನೀಡಲಾಗಿದೆ. ಇದರ ಮುಂದುವರೆದ ಭಾಗವಾಗಿ 7ನೇ ಹಂತದಲ್ಲಿ 41 ಸಾವಿರ ರೈತರಿಗೆ 29.58 ಕೋಟಿ ರೂ. ಪರಿಹಾರ ವಾರದಲ್ಲಿ ನೀಡಲಾಗುತ್ತಿದೆ ಎಂದರು.

ಜಿಲ್ಲೆಯಲ್ಲಿ 14 ಮಣ್ಣು ಪರೀಕ್ಷಾ ಕೇಂದ್ರಗಳಿದ್ದು, ಮಣ್ಣು ಪರೀಕ್ಷೆ ಮಾಡಿಕೊಂಡು ಬೆಳೆ ಬೆಳೆಯಲು ರೈತರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು. ಮನುಷ್ಯ ಹುಷಾರಿಲ್ಲದ ಸಮಯದಲ್ಲಿ ವೈದ್ಯನನ್ನು ಕಂಡಾಗ ರಕ್ತ ಪರೀಕ್ಷೆ ಮಾಡಿದ ನಂತರವೆ ರೋಗದ ಮೂಲ ಕಂಡುಹಿಡಿದು ಹೇಗೆ ಚಿಕಿತ್ಸೆ ನೀಡುತ್ತಾರೋ ಅದೇ ರೀತಿಯಲ್ಲಿ ಮಣ್ಣು ಪರೀಕ್ಷೆ ಮಾಡಿ ಯಾವ ಬೆಳೆ ಬೆಳೆದರೆ ನಿಮಗೆ ಅನುಕೂಲ ಎಂಬುದನ್ನು ರೈತರಿಗೆ ಮನವರಿಕೆ ಮಾಡಿಕೊಡಿ ಎಂದು ಸಚಿವ ಬಿ.ಸಿ.ಪಾಟೀಲ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

“ಅಕ್ಷರ ಬೀಜ ಬಿತ್ತೋಣ ಬನ್ನಿ” ವಿಚಾರ ವಿನಿಮಯ ಕಾರ್ಯಕ್ರಮ

ಜಿಲ್ಲೆಗಳಿಗೆ 108 ಮಾದರಿಯಲ್ಲಿ ಕೃಷಿ ರೈತನ ಸಮಸ್ಯೆಗಳ ತಕ್ಷಣಕ್ಕೆ ಸ್ಪಂದಿಸಲೆಂದೆ ರೈತ ಸಂಜೀವಿನಿ ವಾಹನಗಳನ್ನು ನೀಡಲಾಗಿದ್ದು, ಇದರ ಸದ್ಬಳಕ್ಕೆ ಮಾಡಿಕೊಳ್ಳಬೇಕು. ಪ್ರತಿ ರೈತನ ಕರೆಗೆ ಸ್ಪಂದಿಸಬೇಕು. ಇದು ರೈತಪರ ಸರ್ಕಾರವಾಗಿದ್ದು, ರೈತ ಸ್ನೇಹಿಯಾಗಿ ಆಡಳಿತ ನೀಡಿ ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಈ ವರ್ಷ ಬೆಳೆ ಸಮೀಕ್ಷೆಯನ್ನು ರೈತರಿಂದಲೆ ಮಾಡಿಸಲಾಗುತ್ತದೆ. ಇವರಿಗೆ ನೆರವು ನೀಡಲು 10 ತಿಂಗಳ ಸೇವೆಗೆ ರಾಜ್ಯಾದ್ಯಂತ 6000 ಕೃಷಿಯಲ್ಲಿ ಡಿಪ್ಲೋಮಾ ಪಡೆದ ಯುವಕರನ್ನು ನೇಮಿಸಿಕೊಳ್ಳಲಾಗುತ್ತಿದೆ. ಈ ಸಂಬಂಧ ಈಗಾಗಲೆ ಸಚಿವ ಸಂಪುಟಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಒಪ್ಪಿಗೆ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ITI ವಿದ್ಯಾರ್ಥಿಗಳಿಗೆ ದ್ವಿತೀಯ ವರ್ಷಕ್ಕೆ ವಿನಾಯಿತಿಗೆ ಆಗ್ರಹಿಸಿ ಪ್ರತಿಭಟನೆ

ರಾಷ್ಟ್ರೀಯ ಸುಸ್ಥಿರ ಕೃಷಿ ಅಭಿಯಾನದ ಯೋಜನೆಯಡಿ ಜಿಲ್ಲೆಯಲ್ಲಿ ಹಸು, ಕುರಿ ಖರೀದಿಗೆ ಪ್ರೋತ್ಸಾಹಧನ ನೀಡಬೇಕು. ರೈತರು ಖರೀದಿ ಮಾಡಿದ ನಂತರವೇ ಹಣ ಪಾವತಿಸಬೇಕು ಎಂದರು.

ನಕಲಿ ಬೀಜ, ಗೊಬ್ಬರ ಹಾವಳಿಗೆ ಕಡಿವಾಣ ಹಾಕಿ: ಮುಂದೆ ಏಪ್ರಿಲ್-ಮೇ ನಲ್ಲಿ ಬರುವ ಮುಂಗಾರು ಹಂಗಾಮಿಗೆ ಈಗಲೆ ಸಿದ್ಧತೆ ಮಾಡಿಕೊಳ್ಳಬೇಕು. ರೈತರಿಗೆ ಮಾರಕವಾಗಿರುವ ಮತ್ತು ಅವರ ಜೀವ ಹಿಂಡುವ ನಕಲಿ ಬೀಜ, ಗೊಬ್ಬರ, ಔಷಧಿ ಮಾರಾಟಕ್ಕೆ ಕಡಿವಾಣ ಹಾಕಬೇಕು. ರಾಜ್ಯದಲ್ಲಿ ನಕಲಿ ಕೀಟನಾಶಕ ಮಾರಾಟದ ಸರಾಸರಿ ನೋಡಿದಾಗ ಜಿಲ್ಲೆಯಲ್ಲಿ ಇದರ ಪ್ರಮಾಣ ಶೇ.45 ರಷ್ಟಿದ್ದು, ನಕಲಿ ಮಾರಾಟದ ಜಾಲಕ್ಕೆ ಇತಿಶ್ರೀ ಹಾಡಬೇಕು. ನಕಲಿ ಮಾರಾಟ ಪ್ರಕರಣಗಳಲ್ಲಿ ಮುಲಾಜಿಲ್ಲದೆ ಮಾರಾಟಗಾರರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದ ಸಚಿವರು ಕಳೆದ ವರ್ಷ 17 ಕೋಟಿ ರೂ. ಮೊತ್ತದ ನಕಲಿ ಬೀಜಗಳನ್ನು ಇಲಾಖೆಯ ಜಾಗೃತ ದಳ ಪತ್ತೆ ಹಚ್ಚಿದೆ ಎಂಬುದನ್ನು ಯಾರು ಮರೆಯದಿರಿ ಎಂದರು.

ಅಭಾವ ಸೃಷ್ಠಿಸುವ ವ್ಯಾಪರಸ್ಥರ ಮೇಲೆ ನಿಗಾ ಇಡಿ: ರೈತರಿಗೆ ಸಕಾಲದಲ್ಲಿ ಗೊಬ್ಬರ ಸಿಗದಂತೆ ಯೂರಿಯಾ ಅಭಾವ ಸೃಷ್ಠಿ ಮಾಡುವ ವ್ಯಾಪಾರಸ್ಥರ ಮೇಲೆ ನಿಗಾ ಇಡಿ. ಕಳೆದ ವರ್ಷ ಇಂತಹ 158 ವ್ಯಾಪಾರಸ್ಥರ ಲೈಸೆನ್ಸ್ ಸರ್ಕಾರ ರದ್ದುಗೊಳಿಸಿದೆ ಎಂದರು.

ರಂಗಾಯಣದ ಕಲಾವಿದರಿಗೆ ಹೆಚ್ಚಿನ ಪ್ರೋತ್ಸಾಹ ಸಿಗಲಿ

ಬೆಳೆ ವಿಮೆ ಕಚೇರಿ ಸ್ಥಾಪನೆಗೆ ತಾಕೀತು: ಬೆಳೆ ವಿಮೆ ವಿಚಾರವಾಗಿ ಪರಿಹಾರ ಕೋರಿ ರೈತರು ಕೃಷಿ ಇಲಾಖೆಗೆ ಅಲೆಯುವುದನ್ನು ತಪ್ಪಿಸಲು ಮತ್ತು ನೇರವಾಗಿ ವಿಮಾ ಕಚೇರಿಗೆ ಸಂಪರ್ಕಿಸಲೆಂದು ವಿಮಾ ಸಂಸ್ಥೆಗಳ ಕಚೇರಿಯನ್ನು ಪ್ರತಿ ತಾಲೂಕಿನಲ್ಲಿ ತೆರೆಯಬೇಕು ಎಂದು ಈಗಾಗಲೆ ಆಯಾ ಸಂಸ್ಥೆಗಳಿಗೆ ಸೂಚನೆ ನೀಡಲಾಗಿದ್ದು, ಕೂಡಲೆ ಕಚೇರಿ ತೆರೆಯಬೇಕು ಎಂದು ಸಭೆಯಲ್ಲಿದ್ದ ವಿಮಾ ಸಂಸ್ಥೆಗಳ ಅಧಿಕಾರಿಗಳಿಗೆ ತಾಕೀತು ಮಾಡಿದರು. ಪ್ರತಿ ತಾಲೂಕಿನಲ್ಲಿ ವಿಮಾ ಕಚೇರಿ ಸ್ಥಾಪಿಸಿರುವ ಬಗ್ಗೆ ಜಂಟಿ ಕೃಷಿ ನಿರ್ದೇಶಕರು ಖಾತ್ರಿ ಪಡಿಸಿಕೊಳ್ಳಬೇಕು. ಮುಂದಿನ ಒಂದು ವಾರದಲ್ಲಿ ವಿಮಾ ಕಚೇರಿ ಸ್ಥಾಪನೆ ಮಾಡದಿದ್ದಲ್ಲಿ ಈ ಬಗ್ಗೆ ವರದಿ ಕೊಡಿ ಎಂದು ಜಂಟಿ ಕೃಷಿ ನಿರ್ದೇಶಕರಿಗೆ ಕೃಷಿ ಸಚಿವ ಬಿ.ಸಿ.ಪಟೀಲ ಖಡಕ್ ಸೂಚನೆ ನೀಡಿದರು.

ಜಂಟಿ ಕೃಷಿ ನಿರ್ದೇಶಕ ಡಾ. ರವಿಂದ್ರನಾಥ ಸುಗೂರು ಅವರು ಇಲಾಖೆಯಿಂದ ವಿವಿಧ ಯೋಜನೆಗಳಲ್ಲಿ ಸಾಧಿಸಲಾದ ಆರ್ಥಿಕ ಮತ್ತು ಭೌತಿಕ ಪ್ರಗತಿಯ ವಿವರವನ್ನು ಪಿ.ಪಿ.ಟಿ. ಮೂಲಕ ಸಭೆಗೆ ಅಂಕ-ಸಂಖ್ಯೆಯೊಂದಿಗೆ ವಿವರಿಸಿದರು.

ಕನ್ನಡದ ಗಜಲ್ ಪರಂಪರೆ ಶ್ರೀಮಂತವಾಗಲಿ: ಪ್ರಾಧ್ಯಾಪಕ ಡಾ. ವಿಕ್ರಮ ವಿಸಾಜಿ

ಸಭೆಯಲ್ಲಿ ವಿಧಾನ ಪರಿಷತ್ತಿನ ಸದಸ್ಯ ಬಿ.ಜಿ.ಪಾಟೀಲ, ಕರ್ನಾಟಕ ತೊಗರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಲಿಂಗಾರೆಡ್ಡಿ ಭಾಸರೆಡ್ಡಿ, ಕಾಡಾ ಅಧ್ಯಕ್ಷ ಶರಣಪ್ಪ ತಳವಾರ, ಜಿಲ್ಲಾ ಪಂಚಾಯತಿಯ ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಗುರುಶಾಂತ ಪಾಟೀಲ, ಕೃಷಿಕ ಸಮಾಜದ ಜಿಲ್ಲಾಧ್ಯಕ್ಷ ಸಿದ್ರಾಮಪ್ಪ ಧಂಗಾಪೂರ, ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ, ಜಿಲ್ಲಾ ಪಂಚಾಯತ್ ಸಿ.ಇ.ಓ ಡಾ.ದಿಲೀಶ್ ಸಾಸಿ, ಅಪರ ಕೃಷಿ ನಿರ್ದೇಶಕರಾದ ವೆಂಕಟರಾಮರೆಡ್ಡಿ, ಅಂಟೋನಿ ಎಂ.ಇ. ಸೇರಿದಂತೆ ಜಿಲ್ಲೆಯ ಕೃಷಿ ಅಧಿಕಾರಿಗಳು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here