ಕಲಬುರಗಿ: ಅಲ್ಪಸಂಖ್ಯಾಂತರ ಕಲ್ಯಾಣ ಇಲಾಖೆಯಿಂದ ಆಳಂದ, ಅಫಜಲಪುರ, ಚಿತ್ತಾಪುರ ಜೇವರ್ಗಿ, ಕಲಬುರಗಿ ಹಾಗೂ ಸೇಡಂ ತಾಲೂಕುಗಳಲ್ಲಿರುವ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ಪೂರ್ವ ಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಖಾಲಿಯಿರುವ ಸ್ಥಾನಗಳನ್ನು ಭರ್ತಿ ಮಾಡಲು ಅರ್ಹ ಅಲ್ಪಸಂಖ್ಯಾತರÀ ವಿದ್ಯಾರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ ಎಂದು ಕಲಬುರಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಮಹಿಮೂದ್ ಅವರು ತಿಳಿಸಿದ್ದಾರೆ.
6ನೇ ತರಗತಿಯಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳು ಆಯಾ ತಾಲೂಕಿನ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ ಅವಶ್ಯಕ ದಾಖಲಾತಿಗಳೊಂದಿಗೆ 2021ರ ಮಾರ್ಚ್ 10 ರೊಳಗಾಗಿ ಸಂಬಂಧಪಟ್ಟ ಆಯಾ ತಾಲೂಕಿನ ಮಾಹಿತಿ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬೇಕು. ಕೋವಿಡ್-19 ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳು ಸಾಮಾಜಿಕ ಅಂತರ ಕಾಯ್ದುಕೊಂಡು ಅರ್ಜಿ ಸಲ್ಲಿಸಬೇಕು.
ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಅಥವಾ ಆಳಂದ ಮೊಬೈಲ್ ಸಂಖ್ಯೆ-6362197585, ಅಫಜಲಪೂರ-7899755427, ಚಿತ್ತಾಪೂರ-9741168681, ಜೇವರ್ಗಿ-9535775141, ಕಲಬುರಗಿ-7899755427 ಹಾಗೂ ಸೇಡಂ-7892369798 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.