ಕಲಬುರಗಿ: ರಾಜ್ಯದಲ್ಲಿ ಮೂರನೇ ಹಂತದ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಸೋಮವಾರ ನಗರದ ಜಿಮ್ಸ್ ಮಹಾವಿದ್ಯಾಲಯದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ ಅವರು ಚಾಲನೆ ನೀಡಿದ್ದು, 60 ವರ್ಷ ದಾಟಿರುವ ಅಫಜಲಪುರ ಶಾಸಕ ಎಂ.ವೈ. ಪಾಟೀಲ ಅವರು ಕೋವಿಡ್ ಲಸಿಕೆ ಪಡೆಯುವ ಮೂಲಕ ಇತರೆ ಹಿರಿಯ ನಾಗರಿಕರಿಗೆ ಮಾದರಿಯಾದರು.
ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಅವರು ಈ ಸಂದರ್ಭದಲ್ಲಿ ಮಾತನಾಡಿ, ಇಂದಿನಿಂದ ಮೂರನೇ ಹಂತದ ಕೋವಿಡ್ ಲಸಿಕಾ ವಿತರಣಾ ಅಭಿಯಾನ ಆರಂಭವಾಗಿದ್ದು, ಜಿಲ್ಲೆಯ ಜಿಮ್ಸ್ ಮಹಾವಿದ್ಯಾಲಯ, ಕೆ.ಬಿ.ಎನ್ ಹಾಗೂ ಬಸವೇಶ್ವರ ಆಸ್ಪತ್ರೆ ಹಾಗೂ 6 ತಾಲೂಕು ಕೇಂದ್ರಗಳಲ್ಲಿ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಹಾಗೂ 45 ರಿಂದ 59 ವರ್ಷದೊಳಗಿನ ದೀರ್ಘಾವಧಿ ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ಲಸಿಕೆ ನೀಡಲಾಗುತ್ತಿದೆ. ಯಾರು ಸಹ ಆತಂಕ್ಕೊಳಗಾಗದೆ ಲಸಿಕೆ ತೆಗೆದುಕೊಳ್ಳಿ ಎಂದು ಅವರು ಕರೆ ನೀಡಿದರು.
ಸಾರ್ವಜನಿಕ ಉದ್ಯಮಗಳ ಖಾಸಗೀಕರಣ ವಿರೋಧಿಸಿ ಮಾರ್ಚ್ 16 ರಂದು ಒಗ್ಗಟ್ಟಿನ ಬೃಹತ್ ಪ್ರತಿಭಟನೆ
ಕೋವಿಡ್ ಲಸಿಕೆಯು ಸಂಪೂರ್ಣ ಸುರಕ್ಷತೆಯಿಂದ ಕೂಡಿದ್ದು, ಇದರಿಂದ ಯಾವುದೇ ರೀತಿಯ ಅಡ್ಡ ಪರಿಣಾಮಗಳು ಆಗುವುದಿಲ್ಲ. ಈಗಾಗಲೇ ಶೇ.74 ಅರೋಗ್ಯ ಸಿಬ್ಬಂದಿಗಳು, ಶೇ.45 ಮುಂಚೂಣಿ ಕಾರ್ಯಕರ್ತರು ಜಿಲ್ಲೆಯಲ್ಲಿ ಕೊವ್ಯಾಕ್ಸಿನ್ ಪಡೆದುಕೊಂಡಿದ್ದಾರೆ. ಹೀಗಾಗಿ ಸಾರ್ವಜನಿಕರು, ಹಿರಿಯ ನಾಗರಿಕರು ಆತಂಕ ರಹಿತವಾಗಿ ಲಸಿಕೆ ಪಡೆಯಲು ಮುಂದೆ ಬನ್ನಿ ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದರು.
ಸುರಪುರ: ಬೆಂಕಿ ತಗುಲಿ ಗುಡಿಸಲು ಭಸ್ಮ
ಲಸಿಕೆ ಪಡೆಯಲು ಬಯಸುವ ಸಾರ್ವಜನಿಕರು ತಾಲೂಕು ಕೇಂದ್ರಗಳಲ್ಲಿ ಆಫ್‍ಲೈನ್ ಮೂಲಕ ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಆನ್‍ಲೈನ್ ಮತ್ತು ಆಫ್‍ಲೈನ್ ಎರಡು ವಿಧದಲ್ಲಿ ನೋಂದಣಿ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತವಾಗಿ ಹಾಗೂ ಖಾಸಗಿ ಆಸ್ಪತ್ರೆಯಲ್ಲಿ 250 ರೂ.ಗಳ ಹಣ ಸಂದಾಯ ಮಾಡಿ ಲಸಿಕೆ ತೆಗೆದುಕೊಳ್ಳಬಹುದು ಎಂದು ಅವರು ಹೇಳಿದರು.
ಗಡಿ ಭಾಗದಲ್ಲಿ ಹೈ ಅಲರ್ಟ್: ಮಹಾರಾಷ್ಟ್ರ ಹಾಗೂ ಕೇರಳದಲ್ಲಿ ಕೋವಿಡ್ 2ನೇ ಅಲೆ ಹೆಚ್ಚಾಗಿದ್ದು, ಮಹಾರಾಷ್ಟ್ರ ಗಡಿಗೆ ಅಂಟಿಕೊಂಡಿರುವ ಕಲಬುರಗಿಯ ಜಿಲ್ಲೆಯ ಆಳಂದ ತಾಲೂಕಿನ ಹಿರೊಳ್ಳಿ, ಖಜೂರಿ, ನಿಂಬಾಳ, ಹಾಗೂ ಅಫಜಲಪುರ ತಾಲೂಕಿನ ಬಳ್ಳೂರಗಿ, ಮಾಶಾಳನಲ್ಲಿ ಚೆಕ್ ಪೆÇೀಸ್ಟ್ ಸ್ಥಾಪಿಸಿ ಕಟ್ಟೆಚರ ವಹಿಸಲಾಗಿದೆ. 72 ಗಂಟೆಯ ಪೂರ್ವದಲ್ಲಿ ಪಡೆದ ಕೋವಿಡ್ ನೆಗೆಟಿವ್ ವರದಿ ಇಲ್ಲದೆ ಯಾರಿಗೂ ಸಹ ಜಿಲ್ಲೆಯೊಳಗೆ ಪ್ರವೇಶವಿಲ್ಲ. ಪೆÇಲೀಸ್ ಸಿಬ್ಬಂದಿ ದಿನದ 3 ಪಾಳಿಯನ್ವಯ 24 ಗಂಟೆಯೂ ಇಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು.
ಇದೇ ವೇಳೆ ಲಸಿಕೆ ಪಡೆದ ಆಫಜಲಪುರ ಶಾಸಕ ಎಂ.ವೈ ಪಾಟೀಲ್ ಅವರು ಮಾತನಾಡಿ, ಕೋವಿಡ್ ಲಸಿಕೆಯಿಂದ ಯಾವುದೇ ದುಷ್ಪರಿಣಾಮಗಳು ಆಗುವುದಿಲ್ಲ. ಭಯಬೀತರಾಗದೆ ಎಲ್ಲಾ ಹಿರಿಯರು ಹಾಗೂ 45-59 ವರ್ಷದೊಳಗಿನ ದೀರ್ಘಾವಧಿ ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಗಳು ಕೊವ್ಯಾಕ್ಸಿನ್ ಪಡೆಯಿರಿ ಎಂದು ಸಲಹೆ ನೀಡಿದರು.
ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿ ಅಪಾರ ಪ್ರಮಾಣ ಸ್ಲಾಸ್ಟಿಕ್ ವಸ್ತುಗಳು ನಾಶ
ಜಗತ್ತಿನ ಎಲ್ಲಾ ಕಡೆ ಕೋವಿಡ್-19 ತನ್ನ ಅಟ್ಟಹಾಸ ಮೆರೆದಿದ್ದು, ಪ್ರಪಂಚದಲ್ಲಿಯೆ ಲಸಿಕೆ ನೀಡಲು ಭಾರತ ಮುಂದೆ ಬಂದಿದೆ. ಇದಲ್ಲದೆ ಅನೇಕ ದೇಶಗಳಿಗೂ ಲಸಿಕೆ ಬಳುವಳಿಯಾಗಿ ನೀಡಿದ್ದು ನಮ್ಮ ದೇಶದ ಹೆಮ್ಮೆ ಎಂದರು.
ಈ ಸಂದರ್ಭದಲ್ಲಿ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿರ್ದೇಶಕ ಡಾ. ಓಂ ಪ್ರಕಾಶ ಪಾಟೀಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ದಿಲೀಶ್ ಸಾಸಿ, ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿಭಾಗೀಯ ಜಂಟಿ ನಿರ್ದೇಶಕ ಡಾ. ಶಿವಾನಂದ ಸುರಗಾಳಿ, ಡಿ.ಹೆಚ್.ಓ ಡಾ. ರಾಜಶೇಖರ ಮಾಲಿ, ಜಿಮ್ಸ್ ನಿರ್ದೇಶಕಿ ಡಾ. ಕವಿತಾ ಪಾಟೀಲ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಅಂಬಾರಾಯ ಎಸ್. ರುದ್ರವಾಡಿ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ಪ್ರಭುಲಿಂಗ ಮಾನಕರ್ ಸೇರಿದಂತೆ ಅರೋಗ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.