ಶಾಸಕ ಮತ್ತಿಮೂಡ ಜನ್ಮದಿನ ಆಚರಿಸಿಕೊಳ್ಳದಿರಲು ನಿರ್ಧಾರ

0
35

ಕಲಬುರಗಿ: ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜನರು ತೀವ್ರ ಸಂಕಷ್ಟದಲ್ಲಿದ್ದಾರೆ. ಆದ್ದರಿಂದ ಮಾರ್ಚ್ ೩ರಂದು ನನ್ನ ಜನ್ಮದಿನವನ್ನು ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದೇನೆ ಎಂದು ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮೂಡ ತಿಳಿಸಿದ್ದಾರೆ.

ಕೊರೋನಾ ಎರಡನೇ ಅಲೆ ಬರುತ್ತಿದ್ದು, ರೋಗ ಹರಡುವ ಸಾಧ್ಯತೆಗಳು ಹೆಚ್ಚಾಗಿವೆ. ಅಲ್ಲದೇ ಜನರು ಸಂಕಷ್ಟದಲ್ಲಿದ್ದಾರೆ. ಇಂತಹ ಸಂದಿಗ್ಧ ಸ್ಥಿತಿಯಲ್ಲಿ ಜನ್ಮದಿನದ ಸಂಭ್ರಮದ ಆಚರಣೆ ಸಮಯೋಚಿತವಲ.ಆದ್ದರಿಂದ ಜನ್ಮದಿನ ಆಚರಣೆ ಕೈಬಿಟ್ಟಿದ್ದೇನೆ. ಎಲ್ಲ ಕಾರ್ಯಕರ್ತರು, ಅಭಿಮಾನಿಗಳು ಸಹಕರಿಸಬೇಕು ಎಂದು ಶಾಸಕ ಮತ್ತಿಮೂಡ ಮನವಿ ಮಾಡಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here