ಕಲಬುರಗಿ: ಅಖಿಲ ಭಾರತ ವೀರಶೃವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷರಾದ ಡಾ. ಶಾಮನೂರ ಶಿವಶಂಕರಪ್ಪನವರ ಹಾಗೂ ಅಖಿಲ ವೀರಶೈವ ಮಹಾಸಭಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಈಶ್ವರ ಖಂಡ್ರೆಯವರ ಆದೇಶದ ಮೇರೆಗೆ ಮಹಾಸಭಾ ಸಾಮಾಜಿಕ ಜಾಲತಾಣದ ಜಿಲ್ಲಾ ಸಂಯೋಜಕರಾಗಿ ನಾಗಲಿ೦ಗಯ್ಯ ಮಠಪತಿಯವರನ್ನು ಜಾಲತಾಣ ವಿಭಾಗದ ರಾಜ್ಯ ಅಧ್ಯಕ್ಷರಾದ ಅನೀಲಕುಮಾರ ತಡಕಲ್ ರವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಅಧ್ಯಕ್ಷರಾದ ಶರಣಕುಮಾರ ಮೋದಿ ಯವರ ಸೂಚನೆ ಮೇರೆಗೆ ಮಠಪತಿಯವರನ್ನು ನೇಮಕ ಮಾಡಿ ಮಹತ್ವದ ಜವಾಬ್ದಾರಿ ನೀಡಲಾಗಿದೆ ಎ೦ದು ಮಹಾಸಭಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾ. ಶರಣ ಒಬಿ.ಪಾಟೀಲ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ರಾಜ್ಯಕ್ಕೆ ಮಾದರಿಯನ್ನಾಗಿಸುವ ಗುರಿ: ನಿರಗುಡಿ