ಬಜೆಟ್ ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಕಡೆಗಣನೆ: SFI  ರಾಜ್ಯ ಸಮಿತಿ ಟೀಕೆ

1
34

ಬೆಂಗಳೂರು : ರಾಜ್ಯ ಬಿಜೆಪಿ ಸರ್ಕಾರ ಈ ಬಜೆಟ್ ನಲ್ಲಿ ಕೇವಲ  29,688 ಕೋಟಿ ರೂಪಾಯಿ 11% ಹಣ ಮಾತ್ರ ನೀಡುವುದರ ಮೂಲಕ ತನ್ನ ಶಿಕ್ಷಣ ವಿರೋಧಿ, ವಿದ್ಯಾರ್ಥಿ ದ್ರೋಹಿ ನೀತಿಯನ್ನು ಮುಂದುವರೆಸಿದೆ. ಕಳೆದ ವರ್ಷದ ಬಜೆಟ್ ಗಾತ್ರಕ್ಕೆ ಹೋಲಿಸಿದರೆ ಗಿಂತಲೂ ಈ ವರ್ಷದ ಬಜೆಟ್ ನಲ್ಲಿ 70 ಕೋಟಿ ಹಣ ಅಂದ್ರೆ 0.3% ಹಣವನ್ನು ಶಿಕ್ಷಣ ಕ್ಷೇತ್ರಕ್ಕೆ ಕಡಿತ ಮಾಡಲಾಗಿದೆ.

ಯಡಿಯೂರಪ್ಪ ಸರ್ಕಾರ ಮತ್ತೆ ಮಠ ಮಾನ್ಯಗಳಿಗೆ , ಜಾತಿವಾರು ಪ್ರತಿಮೆಗಳ ನಿರ್ಮಾಣಕ್ಕಾಗಿ ಸಾವಿರಾರು ಕೋಟಿ ರೂಪಾಯಿ ಹಣವನ್ನು ಮೀಸಲಿಡುವುದರ ಮೂಲಕ ಬಿಜೆಪಿ ಸರ್ಕಾರಕ್ಕೆ ಶಿಕ್ಷಣ ವ್ಯವಸ್ಥೆಯ ಸಮಗ್ರ ಅಭಿವೃದ್ಧಿಯ ಬಗ್ಗೆ ಯಾವುದೇ ದೂರದೃಷ್ಟಿಕೋನ ಮತ್ತು ಅಭಿವೃದ್ಧಿ ಕಣ್ಣೋಟ ಇಲ್ಲ ಎಂಬುದು ಈ ಬಜೆಟ್ ನಲ್ಲಿ ಮತ್ತೊಮ್ಮೆ ಸಾಬೀತಾಗಿದೆ ಎಂದು SFI  ಕರ್ನಾಟಕ ರಾಜ್ಯ ಸಮಿತಿ ಟೀಕೆ ವ್ಯಕ್ತಪಡಿಸಿದೆ.

Contact Your\'s Advertisement; 9902492681

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ವಿದ್ಯಾರ್ಥಿ ಸಂಘಟನೆ, ಕೊರೋನಾ ದಿಂದ ಶೈಕ್ಷಣಿಕ ಸಮಸ್ಯೆಗಳು ತೀವ್ರವಾಗಿವೆ. ಈ ಸಂದರ್ಭದಲ್ಲಿ  ರಾಜ್ಯದ ವಿದ್ಯಾರ್ಥಿ ಸಮುದಾಯಕ್ಕೆ ಖಾಲಿ ಇರುವ ಶಿಕ್ಷಕ, ಉಪನ್ಯಾಸಕರ ಹುದ್ದೆಗಳ ಭರ್ತಿಯಾಗಬೇಕು, ವಿಶ್ವವಿದ್ಯಾಲಯಗಳಿಗೆ ಅನುದಾನ ಬಿಡುಗಡೆ ಮಾಡಬೇಕು ವಿಶೇಷವಾಗಿ ಹಂಪಿ ಕನ್ನಡ ವಿಶ್ವವಿದ್ಯಾಲಯದ ಉಳಿಸಬೇಕು, ವಿದ್ಯಾರ್ಥಿ ವೇತನ, ಅಗತ್ಯ  ತರಗತಿ ಕೊಠಡಿ,ಉಚಿತ ಲ್ಯಾಪ್ಟಾಪ್, ಉಚಿತ ಬಸ್ ಪಾಸ್ , ಹಾಸ್ಟೆಲ್ ವಿದ್ಯಾರ್ಥಿಗಳ ಮಾಸಿಕ ಆಹಾರ ಭತ್ಯೆ ಕನಿಷ್ಠ 3500/-ರೂ ಹೆಚ್ಚಿಸಬೇಕೆಂದು ರಾಜ್ಯದ ವಿದ್ಯಾರ್ಥಿ ಸಮುದಾಯವನ್ನು ಸಂಘಟಿಸಿ ಶಿಕ್ಷಣದ ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಬಜೆಟ್ ನಲ್ಲಿ 30% ಮೀಸಲಿಡಬೇಕು ಎಂದು ಇಡೀ ರಾಜ್ಯಾದ್ಯಂತ  ಹೋರಾಟಗಳನ್ನು ನಡೆಸಿದರು ಈ ರಾಜ್ಯ ಸರ್ಕಾರ ಪರಿಗಣಿಸದೆ ಶಿಕ್ಷಣ ಕ್ಷೇತ್ರಕ್ಕೆ ನಿರ್ಲಕ್ಷ್ಯತೆ ತೋರಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಬಿಜೆಪಿ ಸರ್ಕಾರದ ಪ್ರತಿ ಬಾರಿಯೂ ಶಿಕ್ಷಣ ಕ್ಷೇತ್ರಕ್ಕೆ ಹಣ ಕಡಿತ ಮಾಡುವ ಪರಿಪಾಠವನ್ನು ಮುಂದುವರಿಸಿರೋದರಿಂದ ರಾಜ್ಯದ ವಿದ್ಯಾರ್ಥಿ ಸಮುದಾಯಕ್ಕೆ ದ್ರೋಹ ಬಗೆದಿದೆ. ಈ ಶಿಕ್ಷಣ ವಿರೋಧಿ ನೀತಿ ಅನುಸರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಇನ್ನಷ್ಟು ಹೋರಾಟಗಳನ್ನು ತೀವ್ರಗೊಳಿಸಲು ರಾಜ್ಯದ ವಿದ್ಯಾರ್ಥಿ ಸಮುದಾಯಕ್ಕೆ SFI ಕರ್ನಾಟಕ ರಾಜ್ಯ ಸಮಿತಿ ಕರೆ ನೀಡುತ್ತದೆ ಎಂದು ಎಸ್ಎಫ್ಐ ರಾಜ್ಯಾಧ್ಯಕ್ಷರಾದ ಅಮರೇಶ ಕಡಗಡ, ರಾಜ್ಯ ಕಾರ್ಯದರ್ಶಿ ಕೆ.ವಾಸುದೇವರೆಡ್ಡಿ  ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here