ಶಹಾಬಾದ: ನಾವು ಆರೋಗ್ಯವಾಗಿರಲು ರೋಗನಿರೋಧಕ ಶಕ್ತಿ ಅಗತ್ಯವಾಗಿದ್ದು, ಅದಕ್ಕಾಗಿ ಮಕ್ಕಳು ಹಸಿರು ತರಕಾರಿ, ಹಣ್ಣುಗಳನ್ನು ತಿನ್ನುವ ರೂಢಿಯನ್ನು ಹಾಕಿಕೊಳ್ಳಬೇಕೆಂದು ಆರ್‌ಬಿಎಸ್‌ಕೆ ವೈದ್ಯ ಡಾ. ಮಹ್ಮದ್ ಮತೀನ್ ಅಲಿ ಹೇಳಿದರು.
ಅವರು ನಗರದ ಎಸ್.ಜಿ.ವರ್ಮಾ ಹಿಂದಿ ಪ್ರೌಢಶಾಲೆಯಲ್ಲಿ ಆರೋಗ್ಯ ಇಲಾಖೆ ವತಿಯಿಂದ ಆಯೋಜಿಸಲಾದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಆರೋಗ್ಯ ತಪಾಸಣೆ ನಡೆಸಿ ಮಾತನಾಡಿದರು.
ಮಹಾಶಿವರಾತ್ರಿಯ ನಿಮಿತ್ತ ಪಲ್ಲಕ್ಕಿ ಉತ್ಸವ
ಮಕ್ಕಳು ಆದಷ್ಟು ಹೊರಗಿನ ತಿಂಡಿಗಳಾದ ಎಣ್ಣೆಯಲ್ಲಿ ಕರಿದ ಪದಾರ್ಥ, ಪಾಕೆಟ್ ಪದಾರ್ಥಗಳನ್ನು ಹಾಗೂ ಲಘು ತಿಂಡಿಗಳಿಗೆ ಮೊರೆ ಹೋಗದೇ ಮನೆಯಲ್ಲಿ ತಯ್ಯಾರು ಮಾಡಿದ ಆಹಾರವನ್ನು ಸೇವಿಸಿ.ಅದರಲ್ಲೂ ಮೊಳಕೆ ಬಂದ ಬೇಳೆ ಕಾಳುಗಳು, ಬಾಳೆ ಹಣ್ಣು, ಬೆಳ್ಳುಳ್ಳಿ, ಈರುಳ್ಳಿ ಮೊದಲಾದವುಗಳನ್ನು ಸೇವಿಸುವುದರಿಂದ ಅದರಲ್ಲಿರುವ ಜೀವ ಸತ್ವಗಳು ದೇಹದಲ್ಲಿ ಸೇರ್ಪಡೆಯಾಗಿ ರೋಗನಿರೋಧಕ ಶಕ್ತಿ ವೃದ್ಧಿಸುತ್ತದೆ ಎಂದರು.
ಎಲ್ಲಾ ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಆಗಾಗ ಕೈ ತೊಳೆದುಕೊಳ್ಳಬೇಕು.ಸ್ವಚ್ಛತೆಗೆ ಆದ್ಯತೆ ನೀಡಬೇಕು.ಬಿಸಿ ನೀರು ಕುಡಿಯುತ್ತಿರಬೇಕು.ನೆಗಡಿ,ಜ್ವರ, ಕೆಮ್ಮು ಕಂಡು ಬಂದರೆ ಕೂಡಲೇ ವೈದ್ಯಕೀಯ ತಪಾಸಣೆಗೆ ಒಳಗಾಗಬೇಕೆಂದು ಹೇಳಿದರು.
ಡಾ.ಶ್ವೇತಾ ನಿಂಬಾಲಕರ್ ಮಾತನಾಡಿ, ಬೇಸಿಗೆ ಪ್ರಾರಂಭವಾಗಿದ್ದು ನಿರ್ಜಲೀಕರಣ ತಡೆಯಲು ಮತ್ತು ದೇಹವನ್ನು ತಂಪಾಗಿಡಲು ಹಣ್ಣು, ತರಕಾರಿ, ಸೊಪ್ಪುಗಳು, ಸೌತೆಕಾಯಿ ಸೇವನೆ ಉತ್ತಮ. ಜತೆಗೆ ಕಲ್ಲಂಗಡಿ, ಕರ್ಬೂಜ ನಿಂಬು ಶರಬತ್, ಮೂಸಂಬಿ, ವಿವಿಧ ಹಣ್ಣಿನ ರಸ ಸೇವನೆ ಕೂಡ ಒಳ್ಳೆಯದು.ಮಕ್ಕಳು ಹೆಚ್ಚು ಹೆಚ್ಚು ತರಕಾರಿಗಳ ಆಹಾರವನ್ನು ಸೇವಿಸತಕ್ಕದ್ದು ಎಂದು ತಿಳಿಸಿದರು.
ಅಹೋರಾತ್ರಿ ಅನಿರ್ದಿಷ್ಟಾವಧಿ ಸತ್ಯಾಗ್ರಹ ಸ್ಥಳಕ್ಕೆ ಬಾರದ ಅಧಿಕಾರಿಗಳು: ಆಕ್ರೋಶ
ಮುಖ್ಯಗುರುಳಾದ ದಮಯಂತಿ ಸೂರ್ಯವಂಶಿ,ಬಾಬಾ ಸಾಹೇಬ ಸಾಳುಂಕೆ, ಮಹೇಶ್ವರಿ ಗುಳಿಗಿ, ವಿಜಯಲಕ್ಷ್ಮಿ ವೆಂಕಟೇಶ, ರಾಜೇಶ್ವರಿ.ಎಮ್, ಆರ್‌ಬಿಎಸ್‌ಕೆ ತಂಡದ ಶಿವಲೀಲಾ ಇತರರು ಇದ್ದರು.
ಮಕ್ಕಳಲ್ಲಿ ಆರೋಗ್ಯದಲ್ಲಿ ನ್ಯೂನತೆ ಕಂಡು ಬಂದವರಿಗೆ ನಗರದ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಜಿಲ್ಲಾ ಆಸ್ಪತ್ರೆಗೆ ಹೋಗಿ ತಪಾಸಣೆಗೆ ಒಳಗಾಗಬೇಕೆಂದು ಲಿಖಿತ ಪತ್ರ ನೀಡಿದರು.