ಕಲಬುರಗಿ: ನಗರದ ಹಿರಿಯ ಸಿವಿಲ್ ಇಂಜಿನಿಯರ್, ಸಮಾಜ ಸೇವಕ ಮುರಳೀಧರ ಜಿ. ಕರಲಗಿಕರ್ ಅವರು ಬೆಂಗಳೂರಿನ ಸುರ್ವೆ ಕಲ್ಚರಲ್ ಅಕಾಡೆಮಿ ಹಾಗೂ ಭಾರತರತ್ನ ಸರ್. ಎಂ. ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಪ್ರತಿಷ್ಠಾನ ಟ್ರಸ್ಟ್ ಕೊಡಮಾಡುವ `ಭಾರತ ವಿಕಾಸರತ್ನ ರಾಷ್ಟ್ರಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಮಾರ್ಚ್ 17ರಂದು ಸಂಜೆ 5 ಗಂಟೆಗೆ ಬೆಂಗಳೂರಿನ ಕನ್ನಡ ಭವನದ ನಯನ ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಯೋಗದೊಂದಿಗೆ ಆಯೋಜಿಸಲಾಗಿರುವ ಯೋಗ ಭಾರತ ಸಾಂಸ್ಕøತಿಕ ಉತ್ಸವ-2021 `ಸಾಂಸ್ಕøತಿಕ ಪ್ರತಿಭೋತ್ಸವದಲ್ಲಿ ಕರಲಗಿಕರ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸುರ್ವೆ ಕಲ್ಚರಲ್ ಅಕಾಡೆಮಿ ಸಂಸ್ಥಾಪಕರೂ ಆದ ಪತ್ರಕರ್ತ ರಮೇಶ್ ಸುರ್ವೆ ತಿಳಿಸಿದ್ದಾರೆ.
ಆರೋಗ್ಯ ಇಲಾಖೆಯ ವಿವಿಧ ಬೇಡಿಕೆಗೆ ಒತ್ತಾಯಿಸಿ ಕೆಕೆಆರ್ಡಿಬಿ ಅಧ್ಯಕ್ಷರಿಗೆ ಮನವಿ
ಮಾಜಿ ಸಚಿವ ಶಶಿಕಾಂತ ನಾಯಕ್, ಕುಷ್ಟಗಿ ಕ್ಷೇತ್ರದ ಶಾಸಕ ಅಮರೇಗೌಡ ಬಯ್ಯಾಪುರ, ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ, ಬಿಬಿಎಂಪಿ ಆಡಳಿತಾಧಿಕಾರಿ ಗೌರವ್ ಗುಪ್ತಾ ಪ್ರಶಸ್ತಿ ಪ್ರದಾನ ಮಾಡುವರು.
ಮುರಳೀಧರ ಕರಲಗಿಕರ್ ಅವರು ಕಳೆದ 25 ವರ್ಷಗಳಿಂದ ಕಲಬುರಗಿಯಲ್ಲಿ ಸಿವಿಲ್ ಇಂಜಿನಿಯರಿಂಗ್ ವೃತ್ತಿಯಲ್ಲಿ ತೊಡಗಿಸಿಕೊಂಡು ಕಟ್ಟಡ ಮತ್ತಿತರ ನಿರ್ಮಾಣ ಕಾರ್ಯ ಮಾಡುತ್ತಲಿದ್ದಾರೆ. ಜೊತೆಗೆ ಸಮಾಜ ಸೇವೆಯಲ್ಲೂ ಸಕ್ರಿಯರಾಗಿದ್ದಾರೆ. ಕಳೆದ ವರ್ಷ ಕೊರೊನಾ ಲಾಕ್‍ಡೌನ್ ವೇಳೆ ರೈತರು, ಸಣ್ಣ ವ್ಯಾಪಾರಿಗಳು ಸೇರಿದಂತೆ ಬಡವರ್ಗದ ಜನರಿಗೆ ಸಹಾಯ ಮಾಡಿದ್ದರು.
ಲ್ಯಾಂಡ್ ಮಾಫಿಯಾ ಒತ್ತುವರಿ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ
ತಾಂತ್ರಿಕ ಕ್ಷೇತ್ರದಲ್ಲಿನ ಸಾಧನೆ ಮತ್ತು ಸಮಾಜ ಸೇವೆ ಪರಿಗಣಿಸಿ ಕರಲಗಿಕರ್ ಅವರನ್ನು `ಭಾರತ ವಿಕಾಸ ರತ್ನ ರಾಷ್ಟ್ರ ಪ್ರಶಸ್ತಿಗೆ ಆಯ್ಕೆ ಮಾಡಿರುವುದಾಗಿ ಸುರ್ವೆ ತಿಳಿಸಿದ್ದಾರೆ.