ಶಹಾಬಾದ: ಸರಕಾರಿ ನೌಕರರು ಹಾಗೂ ಅವರ ಅವಲಂಬಿತತರಿಗಾಗಿ ಚಾಲ್ತಿಯಲ್ಲಿರುವ ಜ್ಯೋತಿ ಸಂಜೀವಿನಿ ಯೋಜನೆ ಮಾರ್ಪಡಿಸಿ ಶಸ್ತ್ರ ಚಿಕಿತ್ಸೆ ವಿಧಾನಗಳಿಗೆ ನಗದು ರಹಿತ ಚಿಕಿತ್ಸೆ ನೀಡಲು ಸರ್ಕಾರ ಪ್ರಸ್ತಾಪಿಸಿರುವುದಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಶಹಾಬಾದ ತಾಲೂಕಾಧ್ಯಕ್ಷ ಈರಣ್ಣ ಕೆಂಭಾವಿ ಹರ್ಷ ವ್ಯಕ್ತಪಡಿಸಿದ್ದಾರೆ.
ಇತ್ತಿಚ್ಚೆಗೆ ನಡೆದ ಬಜೆಟ್‌ನಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪನವರು ಈ ಕುರಿತು ಪ್ರಸ್ತಾಪಿಸಿದ್ದು, ಎಚ್‌ಆರ್‌ಎಂಎಸ್-೨ ಯೋಜನೆಯಡಿ ನೌಕರರ ಸೇವೆಗಳನ್ನು ಆನ್‌ಲೈನ್ ಮೂಲಕ ಜಾರಿಗೊಳಿಸುವುದು, ಕರ್ನಾಟಕ ರಾಜ್ಯ ಸರ್ಕಾರಿ ವಿಮಾ ಇಲಾಖೆಯ ಎಲ್ಲಾ ವ್ಯವಹಾರಗಳನ್ನು ಗಣಕೀಕರಣಗೊಳಿಸುವುದು, ಮಹಿಳಾ ನೌಕರರಿಗೆ ೬ ತಿಂಗಳ ಮಕ್ಕಳ ಆರೈಕೆ ರಜೆ ಸೌಲಭ್ಯಗಳು ಎಪ್ರಿಲ್ ೧ರ ೨೦೨೧ರಂದು ಅನುಷ್ಠಾನಗೊಳಿಸುತ್ತಿರುವುದು ಸ್ವಾಗತಾರ್ಹ ಎಂದಿದ್ದಾರೆ.