ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬಸವ ಕಲ್ಯಾಣ, ಮಸ್ಕಿ ವಿಧಾನಸಭೆ ಕ್ಷೇತ್ರ ಹಾಗೂ ಬೆಳಗಾವಿ ಲೋಕಸಭೆ ಕ್ಷೇತ್ರದ ಉಪಚುನಾವಣೆ ಸಂಬಂಧ 20 ರಂದು ಶನಿವಾರ ಬೆಳಗ್ಗೆ 11 ಕ್ಕೆ ಪಕ್ಷದ ಹಿರಿಯ ಮುಖಂಡರ ಸಭೆ ಕರೆದಿದ್ದಾರೆ.
ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಈ ಸಭೆ ನಡೆಯಲಿದ್ದು, ಎಐಸಿಸಿ ವೀಕ್ಷಕರೂ ಪಾಲ್ಗೊಳ್ಳಲಿರುವ ಈ ಸಭೆಗೆ ಆಯಾ ಕ್ಷೇತ್ರಗಳ ಚುನಾವಣೆ ಉಸ್ತುವಾರಿ ಹೊತ್ತಿರುವ ಮುಖಂಡರು, ಮಾಜಿ ಮಂತ್ರಿಗಳು, ಶಾಸಕರು, ಸಂಸದರನ್ನು ಆಹ್ವಾನಿಸಲಾಗಿದೆ ಎಂದು ಡಿ.ಕೆ. ಶಿವಕುಮಾರ್ ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.