ಬೆಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ-ಎಸ್.ಡಿ.ಪಿ.ಐ ಪಕ್ಷದ ಬೆಂಗಳೂರು ಜಿಲ್ಲಾ ಸಮಿತಿಯಿಂದ ‘ಸ್ವಾಭಿಮಾನದ ರಾಜಕೀಯಕ್ಕಾಗಿ’ ಎಂಬ ಘೋಷಣೆಯೊಂದಿಗೆ ರಾಜಕೀಯ ಸಮಾವೇಶವನ್ನು ಬೆಂಗಳೂರಿನ ಕೆ.ಜಿ ಹಳ್ಳಿಯ ಎಸ್.ಆರ್ ಫಂಕ್ಷನ್ ಸಭಾಂಗಣದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ದಲಿತ ಹೋರಾಟಗಾರ ಹಾಗೂ ಪ್ರಗತಿಪರ ಚಿಂತಕ ಬಿ.ಆರ್. ಭಾಸ್ಕರ್ ಪ್ರಸಾದ್, ದಲಿತ ಮತ್ತು ಅಹಿಂದ ನಾಯಕರು ಪಕ್ಷ ಸೇರ್ಪಡೆಗೊಂಡರು.
ಸುಲಭವಾಗಿ ಉದ್ಯೋಗ ಲಭಿಸುವ ಕೋರ್ಸ ಎಂದರೆ ಸಿರಾಮಿಕ್, ಸಿಮೆಂಟ್ ವಿಭಾಗ
ಕಾರ್ಯಕ್ರಮದ ಸ್ವಾಗತ ಭಾಷಣವನ್ನು ಬೆಂಗಳೂರು ಜಿಲ್ಲಾ ಉಪಾಧ್ಯಕ್ಷ ಗಂಗಪ್ಪನವರು ಮಾಡಿದರು. ಉದ್ಘಾಟನಾ ಭಾಷಣ ಮಾಡಿದ ಪಕ್ಷದ ಪ್ರಧಾನ ಕಾರ್ಯದರ್ಶಿ ಮುಜಾಹಿದ್ ಷಾಷ ಮಾತನಾಡಿ, ಅವಕಾಶ ವಂಚಿತ ಸಮುದಾಯಗಳ ಸ್ವಾಭಿಮಾನದ ರಾಜಕೀಯ ಪ್ರಗತಿಗಾಗಿ ಎಸ್.ಡಿ.ಪಿ.ಐ ಪಕ್ಷವು ಹೋರಾಡುತ್ತಿದೆ.
ಈ ಹೋರಾಟದಲ್ಲಿ ಭಾಗಿಯಾಗಲು ಪಣತೊಟ್ಟು ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿರುವ ರಾಜ್ಯದ ಪ್ರಗತಿಪರ, ಜನಪರ ಹೋರಾಟಗಾರರನ್ನು ಅವರು ಅಭಿನಂದಿಸಿದರು. ಭವಿಷ್ಯದ ಕರ್ನಾಟಕದ ರಾಜಕೀಯ ದಿಕ್ಕನ್ನು ಬದಲಾಯಿಸುವ ಶಕ್ತಿ ಹೊಂದಿರುವುದಾಗಿ ಪ್ರಶಂಸೆ ವ್ಯಕ್ತಪಡಿಸಿದರು.
ಕೈಗಾರಿಕೋದ್ಯಮಕ್ಕೆ ಒತ್ತು ನೀಡಿ ಉದ್ಯೋಗ ಸೃಷ್ಟಿಸಿ: ಪಾಟೀಲ್
ರಾಜ್ಯಾಧ್ಯಕ್ಷ ಅಬ್ದುಲ್ ಹನ್ನಾನ್ ಮಾತನಾಡಿ, ಎಸ್.ಡಿ.ಪಿಐ ಪಕ್ಷವು ಗ್ರಾಮಮಟ್ಟ, ಹೋಬಳಿ ಮಟ್ಟದ, ತಾಲೂಕು ಮಟ್ಟದ ಸಕ್ರಿಯ ರಾಜಕಾರಣದಲ್ಲಿ ತನ್ನ ಬೇರುಗಳನ್ನು ಗಟ್ಟಿಗೊಳಿಸುತ್ತಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.