ಕಲಬುರಗಿ: ಬಳ್ಳಾರಿಯ ತೋರಣಗಲ್ಲು ಎಂ./ಎಸ್. ಜೆ.ಎಸ್.ಡಬ್ಲ್ಯೂ. ಸ್ಟೀಲ್ ಲಿಮಿಟೆಡ್ ಕಾರ್ಖಾನೆಯಲ್ಲಿ ಒಂದು ವರ್ಷದ ಅವಧಿಗೆ ಈ ಕೆಳಕಂಡ ಐಟಿಐ ಟ್ರೇಡ್‍ಗಳಲ್ಲಿ ಪಾಸಾದ ಅಭ್ಯರ್ಥಿಗಳಿಗೆ ಅಪ್ರೆಂಟಿಸ್ ತರಬೇತಿಗೆ ಆಯ್ಕೆ ಮಾಡಲು ಇದೇ ಮಾರ್ಚ್ 26 ರಂದು ಬೆಳಿಗ್ಗೆ 10.30 ಗಂಟೆಗೆ ಕಲಬುರಗಿ ಸರ್ಕಾರಿ (ಮಹಿಳಾ) ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಕ್ಯಾಂಪಸ್ ಸಂದರ್ಶನ ಏರ್ಪಡಿಸಲಾಗಿದೆ ಎಂದು ಕಲಬುರಗಿ ವಿಭಾಗೀಯ ಕಚೇರಿಯ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಐಟಿಐ ವೃತ್ತಿಯ ಫಿಟ್ಟರ್, ಎಲೆಕ್ಟ್ರಿಶಿಯನ್, ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್ (ಇ.ಎಂ.), ವೆಲ್ಡರ್, ಟರ್ನರ್, ವೈರ್‍ಮೆನ್, ಮಶಿನಿಸ್ಟ್, ಡಿಸೈಲ್ ಮೆಕ್ಯಾನಿಕ್ (ಡಿ.ಎಂ.), ಪಿ.ಎಲ್.ಸಿ. ಆಟೋಮೇಶನ್ ಟ್ರೇಡ್‍ಗಳಲ್ಲಿ ಪಾಸಾದ ಅಭ್ಯರ್ಥಿಗಳನ್ನು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ. ಅಭ್ಯರ್ಥಿಗಳ ವಯೋಮಿತಿ 18 ರಿಂದ 23 ವರ್ಷದೊಳಗಿರಬೇಕು.
ಶೂದ್ರರು ಎಂದು ಕೊಳ್ಳುವುದಾದರೆ ಪರಿಶಿಷ್ಟ ಜಾತಿಯ ಮೀಸಲಾತಿ ಕೇಳಿ: ಮುಖ್ಯಮಂತ್ರಿ ಚಂದ್ರು
ಈ ಕಾರ್ಖಾನೆಯಲ್ಲಿ ಮೇಲ್ಕಂಡ ಐಟಿಐ ಟ್ರೇಡ್‍ಗಳಲ್ಲಿ ಒಟ್ಟು 300 ಅಭ್ಯರ್ಥಿಗಳು ಬೇಕಾಗಿದ್ದಾರೆ. ಅಭ್ಯರ್ಥಿಗಳಿಗೆ ತಿಂಗಳಿಗೆ 9,900 ರೂ.ಗಳ ಶಿಷ್ಯವೇತನ, ವಸತಿ ಮತ್ತು ಕ್ಯಾಂಟೀನ್ ವ್ಯವಸ್ಥೆ ಇರುತ್ತದೆ. ಅರ್ಹ ಅಭ್ಯರ್ಥಿಗಳು ತಮ್ಮ ಎಸ್.ಎಸ್.ಎಲ್.ಸಿ., ಐಟಿಐ ಅಂಕಪಟ್ಟಿ, ಭಾವಚಿತ್ರ ಹಾಗೂ ಇತರೆ ದಾಖಲಾತಿಗಳೊಂದಿಗೆ ಮೇಲ್ಕಂಡ ದಿನದಂದು ಕ್ಯಾಂಪಸ್ ಸಂದರ್ಶನಕ್ಕೆ ಹಾಜರಾಗಬೇಕೆಂದು ಅವರು ತಿಳಿಸಿದ್ದಾರೆ.