ವಿಧಾನಸಭೆ ಉಪಚುನಾವಣೆ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ತಡೆಯಲು ಅಧಿಕಾರಿ ನೇಮಕ

0
54

ಕಲಬುರಗಿ: ರಾಯಚೂರು ಜಿಲ್ಲೆಯ ಮಸ್ಕಿ-59 (ಎಸ್.ಟಿ.) ಹಾಗೂ ಬೀದರ ಜಿಲ್ಲೆಯ ಬಸವಕಲ್ಯಾಣ-47 ವಿಧಾನಸಭೆಯ ಉಪ ಚುನಾವಣೆ ಸಂದರ್ಭದಲ್ಲಿ (ವಾಣಿಜ್ಯ ತೆರಿಗೆ ಇಲಾಖೆಗೆ ಸಂಬಂಧಿಸಿದಂತೆ) ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನೋಡಿಕೊಳ್ಳಲು ಕಲಬುರಗಿ ಪೂರ್ವ ವಲಯ ವಾಣಿಜ್ಯ ತೆರಿಗೆ ಜಂಟಿ ಆಯುಕ್ತರ (ಜಾರಿ) ಕಚೇರಿಯಲ್ಲಿ ನಿಯಂತ್ರಣ ಕೊಠಡಿ ಸ್ಥಾಪಿಸಲಾಗಿದೆ ಎಂದು ಕಲಬುರಗಿ ಪೂರ್ವ ವಲಯ (ಜಾರಿ) ವಾಣಿಜ್ಯ ತೆರಿಗೆಗಳ ಜಂಟಿ ಆಯುಕ್ತರು ತಿಳಿಸಿದ್ದಾರೆ.

ಕಲಬುರಗಿ ಪೂರ್ವ ವಲಯ ವಾಣಿಜ್ಯ ತೆರಿಗೆಗಳ ಉಪ ಆಯುಕ್ತ (ಜಾರಿ) ಲಕ್ಷಾಪತಿ ಎನ್.ನಾಯ್ಕ್ ಇವರನ್ನು (ಮೊಬೈಲ್ ಸಂಖ್ಯೆ 9448811330) ನೋಡಲ್ ಅಧಿಕಾರಿಯಾಗಿ ನೇಮಿಸಲಾಗಿದ್ದು, ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ಸರಕು ಸಾಗಾಣಿಕೆಗೆ ಮಾಡುವ ಕುರಿತು ಮಾಹಿತಿಯಿದ್ದಲ್ಲಿ ಸಾರ್ವಜನಿಕರು ನೋಡಲ್ ಅಧಿಕಾರಿಗಳು ಹಾಗೂ ನಿಯಂತ್ರಣಾ ಕೊಠಡಿಗೆ ಸಂಪರ್ಕಿಸಿ ಮಾಹಿತಿ ನೀಡಬಹುದಾಗಿದೆ.

Contact Your\'s Advertisement; 9902492681

26ಕ್ಕೆ ಅಪ್ರೆಂಟಿಸ್ ತರಬೇತಿಗೆ ಆಯ್ಕೆಗಾಗಿ ಸಂದರ್ಶನ

ನಿಯಂತ್ರಣಾ ಕೊಠಡಿ ವಿವರ ಇಂತಿದೆ: ಕಲಬುರಗಿ ಪ.ವ್ಯ. (ಜಾರಿ) ವಾಣಿಜ್ಯ ತೆರಿಗೆ ಅಧಿಕಾರಿ ಮಹೇಶ್ವರ ಸೋನಾರಕರ್ (ಮೊಬೈಲ್ ಸಂಖ್ಯೆ 9482150039) ಹಾಗೂ ವಾಣಿಜ್ಯ ತೆರಿಗೆ ಪರಿವೀಕ್ಷಕ ಅಶೋಕ ಕುಮಾರ ಅಡಿಕಿಕರ್ (ಮೊಬೈಲ್ ಸಂಖ್ಯೆ: 9448890946) ಇರುತ್ತದೆ.

ವಾಣಿಜ್ಯ ತೆರಿಗೆ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ಬೀದರ-ರಾಯಚೂರ ಹಾಗೂ ನೆರೆಯ ಜಿಲ್ಲೆಗಳಾದ ಕಲಬುರಗಿ, ಯಾದಗಿರಿ ಇವರ ಕಚೇರಿಯ ಸಮನ್ವಯದೊಂದಿಗೆ ಮಾಹಿತಿ ವಿನಿಮಯ ಹಾಗೂ ಮಾಹಿತಿ ಸಲ್ಲಿಕೆಗೆ ಸಂಬಂಧಿಸಿದಂತೆ ಮೇಲ್ಕಂಡ ಕಚೇರಿಯಲ್ಲಿ ನಿಯಂತ್ರಣಾ ಕೊಠಡಿ ಸ್ಥಾಪಿಸಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here