ಕಲಬುರಗಿ: ಜಿಲ್ಲೆಯ ಜೇವರ್ಗಿ ಕ್ರಾಸ್ ಹತ್ತಿರ ಯುವಕನೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ನಡೆದಿದೆ.
ವಿನಯ ಕುಮಾರ ವಿಶ್ವನಾಥ್ ಗಣಲಕೆಡ್ (27) ಕೊಲೆಯಾದ ವ್ಯಕ್ತಿ, ವಿನಯ ಕುಮಾರ ಮೂಲತಃ ಜೇವರ್ಗಿ ತಾಲ್ಲೂಕಿನ ಹರವಾಳ ಗ್ರಾಮದ ನಿವಾಸಿಯಾಗಿದ್ದು, ಕಲಬುರಗಿ ಜಿಲ್ಲೆಯ ಜೀವನ ಪ್ರಕಾಶ ಬಡಾವಣೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾನೆ ಎಂದು ತಿಳಿದುಬಂದಿದೆ.
ನಿನ್ನೆ ರಾತ್ರಿ ಆರೋಪಿಗಳು ವಿನಯ ಕುಮಾರಗೆ ಘೇರಾವ್ ಹಾಕಿ, ಮಾರಕಾಸ್ತ್ರಗಳಿಂದ ಕೊಚಿ ಕೊಲೆ ಮಾಡಿದ್ದಾರೆಂದು ಅನುಮಾನಿಸಲಾಗಿದ್ದು, ಕೊಲೆಯ ಕುರಿತು ಇದ್ದುವರೆಗೆ ನಿಖರ ಮಾಹಿತಿ ತಿಳಿದುಬಂದಿಲ್ಲ. ಆದರೂ ಹಣಕಾಸಿ ವ್ಯವಹಾರ ಕೊಲೆ ನಡೆದಿದೇ ಎನ್ನಲಾಗುತ್ತಿದೆ.
ಈ ಕುರಿತು ನಗರದ ಸ್ಟೇಷನ್ ಬಜಾರ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿದ್ದಾರೆ.