“ದುಡಿಯೋಣ ಬಾ ಅಭಿಯಾನ”

1
44

ಕಲಬುರಗಿ: ಜಿಲ್ಲೆಯ ಅಫಜಲಪುರ ತಾಲೂಕಿನ ಘತ್ತರಗಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಾವಳಗಾ ಗ್ರಾಮದಲ್ಲಿ ಗುರುವಾರ ನರೇಗಾ ಸಹಾಯಕ ನಿರ್ದೇಶಕರಾದ ರಮೇಶ ಪಾಟೀಲ ಅವರು “ದುಡಿಯೋಣ ಬಾ ಅಭಿಯಾನ”ಕ್ಕೆ ಚಾಲನೆ ನೀಡಿದರು.

ನಂತರ ಅವರು ಮಾತನಾಡಿ, ಗ್ರಾಮಗಳು ಅಭಿವೃದ್ಧಿ ಆಗಬೇಕಾದರೆ ಗ್ರಾಮದ ಜನರ ಸಹಕಾರ ತುಂಬಾ ಅವಶ್ಯಕವಾಗಿದ್ದು, ಹಳ್ಳಿ ಜನರಿಗೆ ಉದ್ಯೋಗ ನೀಡಿ ಸ್ವಾವಲಂಬನೆಗೊಳಿಸುವ ಉದ್ದೇಶದಿಂದ ನರೇಗಾ ಯೋಜನೆಯಡಿ ಮೂರು ತಿಂಗಳ ಕಾಲ ಈ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಎಲ್ಲರೂ ಈ ಉದ್ಯೋಗ ಖಾತ್ರಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕೆಂದರು.

Contact Your\'s Advertisement; 9902492681

ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಅಬ್ದುಲ್ ನಬಿ ಮಾತನಾಡಿ, ಬೇಸಿಗೆ ಆರಂಭಿಸುತ್ತಿದ್ದಂತೆ ಗ್ರಾಮೀಣ ಭಾಗದ ಜನರು ಗುಳೆ ಹೋಗುತ್ತಾರೆ. ಇದನ್ನು ತಪ್ಪಿಸುವ ಉದ್ದೇಶದಿಂದ ದುಡಿಯೋಣ ಬಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಗ್ರಾಮದ ಜನರು ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಈ ಯೋಜನೆಯ ಲಾಭ ಪಡೆದುಕೊಳ್ಳಬೇಕೆಂದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷ ವಿಠ್ಠಲ ನಾಟೀಕರ ಮಾತನಾಡಿ ಮಾದರಿ ಗ್ರಾಮ ಮಾಡಲು ಪ್ರತಿಯೊಬ್ಬರ ಸಹಕಾರ ಅವಶ್ಯಕವಾಗಿದೆ. ಕೆಲಸ ಇಲ್ಲವೇ ಕಾಮಗಾರಿಗಾಗಿ ಬೇಡಿಕೆ ಸಲ್ಲಿಸುವ ವಿಧಾನವನ್ನು ಸರಳಗೊಳಿಸುವ ಉದ್ದೇಶದಿಂದ ಈ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಈ ವಿಶೇಷ ಅಭಿಯಾನದಲ್ಲಿ ಬದು ನಿರ್ಮಾಣ, ಸಮಗ್ರ ಕೆರೆ ನಿರ್ಮಾಣ, ಬಚ್ಚಲ ಗುಂಡಿ, ಕೊಳವೆಬಾವಿ ಪುನಶ್ಚೇತನ, ಕೃಷಿ ಅರಣ್ಯೀಕರಣ ಕಾಮಗಾರಿಗಳಿಗೆ ಆದ್ಯತೆ ನೀಡಲಾಗುತ್ತಿದೆ ಎಂದರು.

ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ಭಗವಂತರಾಯ, ಐಇಸಿ ಸಂಯೋಜಕರು, ಗ್ರಾಮ ಪಂಚಾಯತಿ ಉಪಾಧ್ಯಕ್ಷರು, ಸದಸ್ಯರು, ಸಿಬ್ಬಂದಿ ಸೇರಿದಂತೆ ಗ್ರಾಮದ ಜನರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here