ಸರಳವಾಗಿ ಡಾ. ಬಾಬು ಜಗಜೀವನರಾಂ ಅವರ ಜಯಂತ್ಯೋತ್ಸವ

0
19

ಕಲಬುರಗಿ: ಹಸಿರು ಕ್ರಾಂತಿ ಹರಿಕಾರ ಹಾಗೂ ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನರಾಂ ಅವರು ಈ ದೇಶಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಕಲಬುರಗಿ ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ಅವರು ಶ್ಲಾಘಿಸಿದರು.

ಸೋಮವಾರ ಡಾ. ಬಾಬು ಜಗಜೀವನರಾಂ ಅವರ 114ನೇ ಜಯಂತ್ಯೋತ್ಸವ ಹಿನ್ನೆಲೆಯಲ್ಲಿ ಕಲಬುರಗಿ ನಗರದ ಸಾರ್ವಜನಿಕ ಉದ್ಯಾನವನ ಹತ್ತಿರದ ಡಾ. ಬಾಬು ಜಗಜೀವನರಾಂ ಅವರ ಪುತ್ಥಳಿಗೆ ಜಿಲ್ಲಾಧಿಕಾರಿ ಅವರು ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿ ಮಾತನಾಡಿದರು. ಬಾಬೂಜಿ ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಾವೆಲ್ಲ ಸಾಗಿ ಅವರ ತತ್ವಾದರ್ಶಗಳನ್ನು ಪಾಲಿಸಬೇಕು ಎಂದು ಹೇಳಿದರು.

Contact Your\'s Advertisement; 9902492681

ಈ ವೇಳೆ ಡಾ. ಬಾಬು ಜಗಜೀವನರಾಂ ಜಯಂತ್ಯೋತ್ಸವ ಸಮಿತಿಯ ಅಧ್ಯಕ್ಷ ರಾಜು ವಾಡೇಕರ್ ಅವರು ಮಾತನಾಡಿ, ಕೋವಿಡ್-19 ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಬಾಬೂಜಿ ಅವರ ಜಯಂತ್ಯೋತ್ಸವವನ್ನು ಸರಳವಾಗಿ ಆಚರಿಸಲಾಯಿತು ಎಂದು ತಿಳಿಸಿದರು.

ಜೀವನೋಪಾಯಕ್ಕಾಗಿ ಪೊಲೀಸ್ ಇಲಾಖೆ ಸಲ್ಲದು, ಜನಸೇವೆಯೇ ಮುಖ್ಯ: ಬಿ. ದಯಾನಂದ್

ಈ ಸಂದರ್ಭದಲ್ಲಿ ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮೂಡ, ಜಿಲ್ಲಾ ಪಂಚಾಯತ್ ಅಧ್ಯಕ್ಷೆಸುವರ್ಣ ಹಣಮಂತರಾಯ ಮಲಾಜಿ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶೋಭಾ ಸಿದ್ದು ಸಿರಸಗಿ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯೆ ಗೀತಾ ವಾಡೇಕರ್, ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ದಿಲೀಶ್ ಸಾಸಿ, ಡಿಸಿಪಿ ಕಿಶೋರ ಬಾಬು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿಮಿ ಮರಿಯಂ ಜಾರ್ಜ್, ಮಹಾನಗರ ಪಾಲಿಕೆ ಆಯುಕ್ತ ಸ್ನೇಹಲ್ ಸುಧಾಕರ್ ಲೋಖಂಡೆ, ಗಣ್ಯರಾದ ಚಂದ್ರಿಕಾ ಪರಮೇಶ್ವರಿ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕÀ ಅಲ್ಲಾ ಬಕಕ್ಷ್ ಹಾಗೂ ಸಮಾಜದ ಮುಖಂಡರಾದ ಪರಮೇಶ್ವರ ಖಾನಾಪುರ, ಗುಂಡಪ್ಪ ಲಂಡನ್‍ಕರ್, ಶ್ಯಾಮ್ ನಾಟಿಕರ್, ಅಮೃತ ಸಾಗರ, ದಶರಥ ಸೇರಿದಂತೆ ಮತ್ತಿತರ ಗಣ್ಯರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here