ಕಲಬುರಗಿ: ರಾಜ್ಯದಲ್ಲಿ ಮಹಾತ್ಮಾ ಗಾಂಧೀಜಿ ಗ್ರಾಮೀಣ ಉದ್ಯೋಗ ಖಾತ್ರಿ ಯನ್ನು ಸಮರ್ಪಕವಾಗಿ ಜಾರಿಗೆ ಮಾಡುವಂತೆ ಆಗ್ರಹಿಸಿ ಇದೇ ಏಪ್ರಿಲ್ ೯ ರಿಂದ ಜಿಲ್ಲೆ ತಾಲೂಕಿನಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಅಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ ಹೇಳಿದರು.
ನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರದಿಂದ ಕೃಷಿ ಕಾರ್ಮಿಕರಿಗೆ ಕನಿಷ್ಠ ವೇತನ ಪರಿಷ್ಕರಿಸಿ ಕೃಷಿ ಕಾರ್ಮಿಕರಿಗೆ ಪ್ರತಿದಿನ ೪೨೪.೮೦ ರೂ ನೀಡುವಂಣತೆ ಜಾರಿ ಮಾಡಿದೆ, ಅದೇ ರೀತಿಯಲ್ಲಿ ಉದ್ಯೋಗ ಖಾತ್ರಿಯಲ್ಲಿ ಕೆಲಸ ಮಾಡುತ್ತಿರುವುದು ಕೂಡಾ ಕೃಷಿ ಕಾರ್ಮಿಕರೆ ಇರುವುದರಿಂದ ಅವರಷ್ಟೇ ವೇತನ ಇವರಿಗೂ ನೀಡಲಿ ಎಂದು ಆಗ್ರಹಿಸಿದ್ದಾರೆ.
ರೈಲ್ವೆ ವಿಭಾಗೀಯ ಕಚೇರಿ ಸೇರಿದಂತೆ ಕೇಂದ್ರದ ಯೋಜನೆ ತರುವುದಾಗಿ ಸಂಸದ ಜಾಧವ ಸ್ಪಂದನೆ
ಮಹಿಳಾ ಹೋರಾಟಗಾರ್ತಿ ಕೆ. ನೀಲಾ ಮಾತನಾಡಿ, ಉದ್ಯೋಗ ಖಾತ್ರಿಯಲ್ಲಿ ಕೆಲಸ ಮಾಡುತ್ತಿರುವ ಕೃಷಿ ಕಾರ್ಮಿಕರಿಗೆ ೬೦೦ ರೂ ನೀಡುವಂತೆ ಹಲವು ದಿನಗಳಿಂದಲೂ ಸರ್ಕಾರದ ಮುಂದೆ ಬೇಡಿಕೆ ಇಟ್ಟಿದ್ದೇವೆ, ಹೀಗಾಗಿ ರಾಜ್ಯ ಸರ್ಕಾರ ಈಗಲಾದರೂ ಈಗ ನೀಡುತ್ತಿರುವ ೨೮೯ ರೂ. ಕೂಲಿಯನ್ನು ೬೦೦ ಕ್ಕೆ ಏರಿಕೆ ಮಾಡುವಲ್ಲಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕೆಂದು ಒತ್ತಡ ಹೇರಿದರು.
ಏ. ೯ ರಂದು ರಾಜ್ಯದ್ಯಂತ ಕರ್ನಾಟಕ ಪ್ರಾಂತ ರೈತ ಸಂಘ, ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ಹಾಗೂ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಪ್ರತಿಭಟನೆ ಕೈಗೊಳ್ಳಲಾಗುತ್ತಿದೆ ಎಂದು ಕೆ. ನೀಲಾ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಅಶೋಕ ಮ್ಯಾಗೇರಿ, ಭೀಮಶೆಟ್ಟಿ ಯಂಪಳ್ಳಿ, ಅಮೀನಾ ಬೇಗಂ, ಚಂದಪ್ಪ ಪೂಜಾರಿ ಮತ್ತಿತರರು ಇದ್ದರು.