ಕಲಬುರಗಿ : ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಕಲ್ಯಾಣ ಮಾಡಿ ಇಲ್ಲವೇ ಪ್ರತ್ಯೇಕ ರಾಜ್ಯ ಕೊಡಿ ಎಂಬ ಬೇಡಿಕೆಯನ್ನುಟ್ಟುಕೊಂಡು ಕಲ್ಯಾಣ ಕರ್ನಾಟಕ ಜನಪರ ಸಂಘರ್ಷ ಸಮಿತಿ ಹಮ್ಮಿಕೊಂಡಿರುವ ಕಲ್ಯಾಣ ನಡೆ ಜನಪ್ರತಿನಿಧಿಗಳ ಕಡೆ ಎಂಬ ಅಭಿಯಾನದಂತೆ ವಿಧಾನ ಪರಿಷತ್ ಸದಸ್ಯರಾದ ಬಿ.ಜಿ. ಪಾಟೀಲವರ ನಿವಾಸಕ್ಕೆ ಭೇಟಿ ನೀಡಿ ಮನವಿ ಪತ್ರವನ್ನು ಸಲ್ಲಿಸಿ ವಿವರವಾಗಿ ನಮ್ಮ ಭಾಗದ ಸಮಸ್ಯೆಗಳನ್ನು ಹಾಗೂ ನಮ್ಮ ಪ್ರದೇಶಕ್ಕೆ ಆಗುತ್ತಿರುವ ನಿರಂತರ ಅನ್ಯಾಯ ಮತ್ತು ಮಲತಾಯಿ ಧೋರಣೆಯ ಬಗ್ಗೆ ಚರ್ಚಿಸಿದಾಗ ವಿಧಾನಪರಿಷತ್ ಸದಸ್ಯರಾದ ಬಿ.ಜಿ. ಪಾಟೀಲರವರು ಪ್ರಸ್ತುತ ದಿನಗಳಲ್ಲಿ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಮತ್ತು ನಮ್ಮ ಹಕ್ಕಿನ ಯೋಜನೆಗಳನ್ನು ಪಡೆಯಲು ರಾಜಕೀಯ ಇಚ್ಛಾಶಕ್ತಿ ಅತಿ ಅವಶ್ಯವಾಗಿದೆ ಎಂದು ಹೇಳಿದರು.
ಅಗ್ನಿ ಅವಘಡ ಸ್ಥಳಕ್ಕೆ ಶಾಸಕ ಸುಭಾಷ್ ಗುತ್ತೇದಾರ ಭೇಟಿ
ಕಲ್ಯಾಣ ಕರ್ನಾಟಕ ಜನಪರ ಸಂಘರ್ಷ ಸಮಿತಿಯ ಸಂಸ್ಥಾಪಕ ಅಧ್ಯಕ್ಷರಾದ ಲಕ್ಷ್ಮಣ ದಸ್ತಿಯವರ ನೇತೃತ್ವದಲ್ಲಿ ಸಮಿತಿ ನಡೆಸುತ್ತಿರುವ ಅಭಿಯಾನದಂತೆ ಶಾಸಕರಾದ ಬಿ.ಜಿ. ಪಾಟೀಲವರ ಮನೆಗೆ ಭೇಟಿ ನೀಡಿ ಕಲ್ಯಾಣ ಕರ್ನಾಟಕದ ಸಂಸದರು, ಶಾಸಕರು, ಸಂಘಟಿತ ರಾಜಕಿಯ ಇಚ್ಛಾಶಕ್ತಿ ವ್ಯಕ್ತಪಡಿಸಬೇಕೆಂದು ಮನವಿ ಮಾಡಿದರಲ್ಲದೆ ಬರುವ ದಿನಗಳಲ್ಲಿ ವಿಭಾಗೀಯ ಕೇಂದ್ರ ಕಲಬುರಗಿಯಲ್ಲಿ ಹಮ್ಮಿಕೊಳ್ಳಲು ನಿರ್ಧರಿಸಲಾಗಿರುವ ಕಲ್ಯಾಣ ಕರ್ನಾಟಕ ಜನತಾ ಅಧಿವೇಶನಕ್ಕೆ ಪಾಲ್ಗೊಳ್ಳಲು ಮತ್ತು ಎಲ್ಲಾ ರೀತಿಯ ಸಹಕಾರ ನೀಡಲು ಮನವರಿಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ಸಮಿತಿಯ ಮುಖಂಡರಾದ ಭವಾನಿಕುಮಾರ ವಳಕೇರಿ, ಮನೀಷ್ ಜಾಜು, ಜ್ಞಾನ ಮಿತ್ರ ಸ್ಯಾಮ್ಯುವೆಲ್, ಅಬ್ದುಲ ರಹೀಮ್, ಶಾಂತಪ್ಪ ಕಾರಭಾಸಗಿ, ಸಾಬಿರ ಅಲಿ, ಸಂಧ್ಯಾರಾಜ ಸ್ಯಾಮ್ಯುವೆಲ್, ರಾಜು ಜೈನ್, ಬಾಬುರಾವ ಗಂವ್ಹಾರ, ವೀರೇಶ ಪುರಾಣಿಕ, ಮಖ್ಬೂಲ್ ಪಟೇಲ್, ಶಿವಾನಂದ ಕಾಂದೆ, ಭೀಮರಾಯ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.