ಕಲಬುರಗಿ: ಕಲ್ಯಾಣ ಕರ್ನಾಟಕ ಅಭಿವೃದ್ಧಿ ಆಶಯದೊಂದಿಗೆ ಕಲ್ಯಾಣ ಕರ್ನಾಟಕ ಜನಪರ ಸಂಘರ್ಷ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಲಕ್ಷ್ಮಣ್ ದಸ್ತಿ ಅವರು ಇತ್ತೀಚೆಗೆ ರಾಜ್ಯ ವಿಧಾನ ಪರಿಷತ್ ಸದಸ್ಯ ಬಿ.ಜಿ. ಪಾಟೀಲ್ ಅವರಿಗೆ ಗಮನಸೆಳೆದಾಗ ಶಾಸಕರು ಪಕ್ಷಾತೀತವಾಗಿ ಎಲ್ಲರನ್ನೂ ಕರೆದುಕೊಂಡು ಮುಖ್ಯಮಂತ್ರಿಗಳ ಬಳಿಗೆ ನಿಯೋಗ ತೆಗೆದುಕೊಂಡು ಹೋಗಿ ಚರ್ಚಿಸೋಣ ಎಂದು ಭರವಸೆ ನೀಡಿರುವ ಕ್ರಮ ಅತ್ಯಂತ ಸ್ವಾಗತಾರ್ಹವಾಗಿದೆ ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಹಿರಿಯ ಮುಖಂಡ ಶ್ಯಾಮರಾವ್ ಪ್ಯಾಟಿ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಈ ಭಾಗದ ಅಭಿವೃದ್ಧಿಗೆ ಬಿಜೆಪಿ ಸರ್ಕಾರವು ಬದ್ಧವಾಗಿದೆ. ಅವರು ಈ ಹಿಂದೆ ವಿಧಾನ ಮಂಡಲದ ಅಧಿವೇಶನದಲ್ಲಿ ಈ ಭಾಗಕ್ಕೆ ಹೆಚ್ಚಿನ ಅನುದಾನ ಕೊಟ್ಟು ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ದಿಗೆ ಸಹಕರಿಸಬೇಕು ಎಂದು ಸರ್ಕಾರಕ್ಕೆ ಗಮನಸೆಳೆದಿರುವುದನ್ನು ಪ್ಯಾಟಿ ಅವರು ಹೇಳಿಕೆಯಲ್ಲಿ ಉಲ್ಲೇಖಿಸಿದ್ದಾರೆ.